ಹಬ್ಬದ ಮಾರನಹಳ್ಳಿಯಲ್ಲಿ ರೈತ ಸಂಘದ ಮಹಿಳಾ ಘಟಕ ಪ್ರಾರಂಭ

28_08_Mdy_01(B(S.C.Madhuchandan)
Published on
ಮಂಡ್ಯ: ತಾಲೂಕಿನ ಕೆರಗೋಡು ಹೋಬಳಿ ವ್ಯಾಪ್ತಿಯ ಹಬ್ಬದ ಮಾರನಹಳ್ಳಿ ಗ್ರಾಮದಲ್ಲಿ ರೈತ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಸ್.ಸಿ.ಮಧುಚಂದನ್ ನೇತೃತ್ವದಲ್ಲಿ ಮಹಿಳಾ ಘಟಕ ಉದ್ಘಾಟನೆಗೊಂಡಿತು.
ಬಳಿಕ ಮಾತನಾಡಿದ ಅವರು, ನಮಗಾಗುತ್ತಿರುವ ಸಮಸ್ಯೆಗಳ ಬಗ್ಗೆ ನಾವೇ ದನಿ ಎತ್ತಬೇಕು. ನಾವೆಲ್ಲರೂ ಸಂಘಟಿತರಾಗಿ ಧ್ವನಿ ಎತ್ತಿದ್ದಾಗ ಮಾತ್ರ ಸಮಸ್ಯೆಗಳು ಬಗೆಹರಿಯುತ್ತವೆ. ನಮ್ಮನ್ನಾಳುವ ರಾಜಕಾರಣಿಗಳೇ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಜನರಿಂದ ಪರೋಕ್ಷವಾಗಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದರು.
ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ಮಾತನಾಡಿ, ನಮ್ಮನ್ನಾಳುವ ಸರ್ಕಾರಗಳು ಸರ್ಕಾರಿ ಶಾಲೆಗಳ ಬಗ್ಗೆ ಕಿಂಚಿತ್ತು ಆಲೋಚಿಸುತ್ತಿಲ್ಲ. ಸರ್ಕಾರಿ ಶಾಲೆಗಳಲ್ಲಿ ಓದಿದ ಮಕ್ಕಳು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ ಎಂದರು.
ರೈತ ಮುಖಂಡರಾದ ಪ್ರಸನ್ನ ಎನ್ ಗೌಡ, ರಾಜ್ಯ ಖಜಾಂಚಿ ತಗ್ಗಳ್ಳಿ ಪ್ರಸನ್ನ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗಪ್ಪಾಜಿ, ಖಜಾಂಚಿ ಶೆಟ್ಟಳ್ಳಿ ರವಿಕುಮಾರ್, ಮಂಡ್ಯ ತಾಲೂಕು ಅಧ್ಯಕ್ಷ  ಶಿವಳ್ಳಿ ಚಂದ್ರು, ಕಾರ್ಯದರ್ಶಿ ಹಲ್ಲೆಗೆರೆ ಹರೀಶ್, ಹಬ್ಬದಮಾರನಹಳ್ಳಿ ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net