ಬೆಲ್ಲಕ್ಕೆ ವಿಧಿಸಿರುವ ಜಿಎಸ್‌ಟಿ ಹಿಂಪಡೆಯಿರಿ: ರೈತ ಸಂಘದ ಪಾದಯಾತ್ರೆ

Protest
Published on

ಮಂಡ್ಯ: ಬೆಲ್ಲ ಸೇರಿದಂತೆ ಅಗತ್ಯ ವಸ್ತುಗಳಿಗೆ ಸರಕು ಸೇವಾ ತೆರಿಗೆ ವಿಧಿಸಲು ಮುಂದಾಗಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ರೈತ ಸಂಘದ ಕಾರ್ಯಕರ್ತರು ಪಾದಯಾತ್ರೆ ಮೂಲಕ ಪ್ರತಿಭಟನೆ ನಡೆಸಿದರು.
ತಾಲೂಕಿನ ಕೆಬ್ಬಹಳ್ಳಿ ಗ್ರಾಮದಿಂದ ನೂರಾರು ಸಂಖ್ಯೆಯಲ್ಲಿ ಎತ್ತಿನ ಗಾಡಿಗಳೊಂದಿಗೆ ಪಾದಯಾತ್ರೆಯಲ್ಲಿ ಆಗಮಿಸಿದ ರೈತರು, ನಗರದ ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಬೆಲ್ಲಕ್ಕೆ ಜಿಎಸ್‌ಟಿ ವಿಧಿಸಿರುವ ಆದೇಶ ಹಿಂಪಡೆಯಬೇಕು. ಅಂತೆಯೇ ವೈಜ್ಞಾನಿಕ ಬೆಲೆಯನ್ನು ನಿಗದಿಪಡಿಸಬೇಕು. ಆಲೆಮನೆಗಳಿಗೆ ಕಲ್ಲು ನುರಿಸಲು ಗುಣಮಟ್ಟದ ವಿದ್ಯುತ್ ಸರಬರಾಜು ಮಾಡಬೇಕು. ಈಗಾಗಲೇ ಕೇಂದ್ರ ಸರ್ಕಾರ ಎಪಿಎಂಸಿ ಕಾಯಿದೆ ತಿದ್ದುಪಡಿ ತಂದಿರುವುದನ್ನು ವಾಪಸ್ ಪಡೆದಿದೆ. ಆದರೆ ರಾಜ್ಯ ಸರ್ಕಾರ ಈವರೆಗೂ ವಾಪಸ್ ಪಡೆದಿಲ್ಲ. ಕೂಡಲೇ ರಾಜ್ಯ ಸರ್ಕಾರ ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತಂದಿರುವುದನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಸಂಘಟನಾ ಕಾರ್ಯದರ್ಶಿ ಎಸ್.ಸಿ.ಮಧುಚಂದನ್, ಪ್ರಧಾನ ಕಾರ್ಯದರ್ಶಿ ಜಿ.ಎಸ್. ಲಿಂಗಪ್ಪಾಜಿ, ಮುಖಂಡರಾದ ಪ್ರಸನ್ನ ಎನ್.ಗೌಡ, ಎಸ್.ಕೆ.ರವಿಕುಮಾರ್, ಜಿ.ಎ.ಶಂಕರ್, ವಿಜಯಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net