

ಮಂಡ್ಯ: ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಪಿಡಿಒ, ಕಾರ್ಯದರ್ಶಿ ಮತ್ತು ನೌಕರರು ಸಾರ್ವಜನಿಕರ ಕೆಲಸ ನಿರ್ವಹಿಸದೇ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆಂದು ಆರೋಪಿಸಿ ರೈತ ಸಂಘ ತಾಲೂಕು ಘಟಕದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ತಾಲೂಕು ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಿದ ಕಾರ್ಯಕರ್ತರು, ಸಾರ್ವಜನಿಕರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ೋಷಣೆ ಕೂಗಿದರು. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ. ಈ ಸಂಬಂಧ ಸಮಗ್ರ ತನಿಖೆ ನಡೆಸಬೇಕು. ಪಾವತಿಸಬೇಕಿರುವ ಆಸ್ತಿ ತೆರಿಗೆಗಿಂತಲೂ ಹೆಚ್ಚುವರಿ ಹಣವನ್ನು ವಸೂಲಿ ಮಾಡಲಾಗುತ್ತಿದೆ. ಗ್ರಾಪಂ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ನಿರ್ವಹಣಾ ಘಟಕ ಪ್ರಾರಂಭಿಸದೇ ಆ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿದರು.
ಇದಲ್ಲದೆ ಕಸ ವಿಲೇವಾರಿ ವಾಹನ ಬಳಸದೇ ಡೀಸೆಲ್ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ನಮೂನೆ 11ಎ ಮತ್ತು ಬಿ ಖಾತೆಯನ್ನು ಮಾಡಿಕೊಡಲು ಲಂಚ ಪಡೆಯಲಾಗುತ್ತಿದೆ. ಗಾಣದಾಳು ಗ್ರಾಪಂನಲ್ಲಿ ಜಮೀನು ಖರೀದಿ ಮಾಡಿ ಲಾನುಭವಿಗಳಿಗೆ ಹಂಚಿಕೆ ಮಾಡದೇ ವಂಚಿಸಲಾಗುತ್ತಿದೆ. ಆದ್ದರಿಂದ ಈ ಎಲ್ಲ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಜಯರಾಮು, ಅಣ್ಣಯ್ಯ, ರಾಣಿ, ಆನಂದಕುಮಾರ್, ನವೀನ, ನಾಗರಾಜು ಇತರರಿದ್ದರು.