ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಆಗಬಾರದು: ಸಚಿವ ಆರ್​.ಬಿ. ತಿಮ್ಮಾಪುರ ಲೇವಡಿ

Untitled-design-2024-06-17T124106.996
Published on

ಬಾಗಲಕೋಟೆ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಫೋಕ್ಸೋ ಪ್ರಕರಣದಲ್ಲಿ ಇಂದು ಸಿಐಡಿ ಪೊಲೀಸರ ವಿಚಾರಣೆಗೆ ಹಾಜರಾಗಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ.ಎಸ್​. ಯಡಿಯೂರಪ್ಪ ಕುರಿತು ಮುಧೋಳದಲ್ಲಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಪ್ರತಿಕ್ರಿಯಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟ ಇಲಾಖೆ ವಿಚಾರಣೆ ನಡೆಸುತ್ತಿದೆ. ಸತ್ಯಾಸತ್ಯತೆ ಹೊರಬರಲಿ. ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಆಗಬಾರದು, ಒಳ್ಳೆಯದಲ್ಲ. ಪ್ರಕರಣ ಕುರಿತು ಇಲಾಖೆ ವಿಚಾರಣೆ ಮಾಡುತ್ತದೆಯೇ ವಿನಃ ಸರ್ಕಾರ ಅಥವಾ ಯಾವುದೇ ವ್ಯಕ್ತಿ ವಿಚಾರಣೆ ಮಾಡಲು ಸಾಧ್ಯವಿಲ್ಲ. ಕೆಲವರ ಹೇಳಿಕೆ ಗಮನಿಸಿದ್ದೇನೆ. ಇದನ್ನು ಸಿದ್ದರಾಮಯ್ಯ, ಡಿಕೆಶಿ ಮಾಡಿದ್ದಾರೆ ಎನ್ನುವ ರೀತಿ ಹೇಳಿದ್ದಾರೆ. ಜನರನ್ನು ತಪ್ಪು ದಾರಿಗೆ ಎಳೆದು, ದಿಕ್ಕು ಬದಲಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಕೋರ್ಟ್ ಆದೇಶದಂತೆ ನಡೆದುಕೊಳ್ಳಲಾಗಿದೆ. ಇದರಲ್ಲಿ ಯಾವುದೇ ಸೇಡು, ಮತ್ತೊಂದು ನಮ್ಮ ಸರ್ಕಾರದಲ್ಲಿಲ್ಲ. ಯಾವುದೋ ರಾಜಕೀಯ ಲಾಭ ಪಡೆಯಲು, ಜಾತಿಯನ್ನು ಎತ್ತಿಕಟ್ಟಲು ಹೀಗೆಲ್ಲ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡರ ವಿರುದ್ದ ಪರೋಕ್ಷವಾಗಿ ಕಿಡಿಕಾರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net