

ಮೈಸೂರು: ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಆರ್‌ಸಿಬಿ ತಂಡ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ವಿಜಯೊ ೀತ್ಸವ ಹಾಗೂ ಸಂಭ್ರಮಾಚರಣೆ ನಡೆಯಿತು.
ಆರ್‌ಸಿಬಿ ಗೆಲುವಿನ ಹಿನ್ನೆಲೆಯಲ್ಲಿ ನಗರದ 11 ಇಂದಿರಾ ಕ್ಯಾಂಟೀನ್‌ಗಳಲ್ಲಿ ಬುಧವಾರ ಕೆ.ಆರ್. ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ ನೇತೃತ್ವದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಹೋಳಿಗೆ ಊಟ ನೀಡಲಾಯಿತು.
ಕೆ.ಆರ್. ಆಸ್ಪತ್ರೆ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಹೋಳಿಗೆ ಊಟ ನೀಡಿ ಮಾತನಾಡಿದ ಬಸವರಾಜ್ ಬಸಪ್ಪ, ಆರ್‌ಸಿಬಿಗೆ ಇದುವರೆಗೆ ಗೆಲುವು ಒಲಿದಿರಲಿಲ್ಲ. ಆದರೆ, 18ನೇ ಆವೃತ್ತಿಯ ಐಪಿಎಲ್ ಪಂದ್ಯಾವಳಿಯಲ್ಲಿ ಆರ್‌ಸಿಬಿ ಭರ್ಜರಿಗೆ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಹೋಳಿಗೆ ಊಟ ನೀಡಲಾಗಿದೆ ಎಂದು ಹೇಳಿದರು.
ಈ ಸಂದರ್ಭ ಕುರುಬರ ಸಂಘದ ಹಂಗಾಮಿ ರಾಜ್ಯಾಧ್ಯಕ್ಷ ಸುಬ್ರಹ್ಮಣ್ಯ, ಸಮಾಜ ಸೇವಕಿ ಖುಷಿ ವಿನು, ಪ್ರಮುಖರಾದ ಶಿವಕುಮಾರ್, ಎಸ್.ಎನ್.ರಾಜೇಶ್, ಮೈಸೂರು ಬಸವಣ್ಣ ಹಾಗೂ ಇತರರು ಇದ್ದರು.
ವಿಜಯೋತ್ಸವ: ಆರ್‌ಸಿಬಿ ಗೆಲುವಿನ ಹಿನ್ನೆಲೆಯಲ್ಲಿ ಅಭಿಮಾನಿಗಳು ಮಂಗಳವಾರ ಮಧ್ಯರಾತ್ರಿ ವಿಜಯೋತ್ಸವ ಆಚರಿಸಲಾಯಿತು. ನಗರದ ಕೆ.ಆರ್. ವೃತ್ತ, ದೇವರಾಜ ಅರಸು ರಸ್ತೆ ಸೇರಿದಂತೆ ವಿವಿಧೆಡೆ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಅಭಿಮಾನಿಗಳು ಆರ್‌ಸಿಬಿ ಪರವಾಗಿ ಜಯಘೋಷದ ಮೂಲಕ ವಿಜಯೋತ್ಸವ ಆಚರಿಸಿದರು. ತಡರಾತ್ರಿಯಾದರೂ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ತೋರಿಸಿ ಎಲ್ಲರನ್ನು ಚದುರಿಸಿದರು. ನಗರದ ಹಲವಾರು ಕಡೆಗಳಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.