ಪಂಜ ಶ್ರೀರಕ್ತೇಶ್ವರಿ ದೈವದ ಪುನಃಪ್ರತಿಷ್ಠಾಪನೆ

New Project (2)
Published on

ಸುಬ್ರಹ್ಮಣ್ಯ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವಳದ ಪರಿವಾರ ದೈವ ಶ್ರೀ ರಕ್ತೇಶ್ವರಿ ದೈವದ ಪುನಃಪ್ರತಿಷ್ಠಾಪನೆ ಶನಿವಾರ ನೆರವೇರಿತು. ದೈವದ ಮೂಲಸ್ಥಾನದಲ್ಲಿ ನಿರ್ಮಿಸಿದ ನೂತನ ಕಟ್ಟೆಯಲ್ಲಿ ಕ್ಷೇತ್ರದ ತಂತ್ರಿ ಕೆಮ್ಮಿಂಜೆ ನಾಗೇಶ ತಂತ್ರಿಗಳು ಪ್ರತಿಷ್ಠಾಪನಾ ಕಾರ್ಯ ನೆರವೇರಿಸಿದರು.

ಶುಕ್ರವಾರ ಸಂಜೆ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹವಾಚನ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ಮಹಾಪೂಜೆ, ಪ್ರಸಾದ ವಿತರಣೆ ನೆರವೇರಿತು. ಶನಿವಾರ ಬೆಳಗ್ಗೆ ಮಹಾಗಣಪತಿ ಹೋಮ, ಕಲಶ ಪೂಜೆ ನಡೆಯಿತು. ಬಳಿಕ ರಕ್ತೇಶ್ವರಿ ದೈವದ ಪ್ರತಿಷ್ಠಾಪನೆ ನೆರವೇರಿತು. ಸಂಜೆ ದೈವದ ಭಂಡಾರ ತೆಗೆಯಲಾಯಿತು. ರಾತ್ರಿ ದೈವದ ನೇಮೋತ್ಸವ ನಡೆಯಿತು.

ಪಂಜ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರು, ದೇವಸ್ಥಾನದ ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕ್ಕಳ, ಆನಂದ ಗೌಡ ಕಂಬಳ, ಉದಯ ಕುಮಾರ್ ಬೆಟ್ಟ, ಪರಮೇಶ್ವರ ಬಿಳಿಮಲೆ, ಉಮೇಶ್ ಬಳ್ಪ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರಾಮಚಂದ್ರ ಭಟ್, ಸತ್ಯನಾರಾಯಣ ಭಟ್ ಕಾಯಂಬಾಡಿ, ಧರ್ಮಪಾಲ ಗೌಡ ಮರಕ್ಕಡ, ಸಂತೋಷ್ ಕುಮಾರ್ ರೈ ಬಳ್ಪ, ಮಾಯಿಲಪ್ಪ ಗೌಡ ಎಣ್ಮೂರು, ಧರ್ಮಣ್ಣ ನಾಯ್ಕ ಗರಡಿ, ರಾಮಚಂದ್ರ ಭಟ್, ಮಾಲಿನಿ ಕುದ್ವ, ಪವಿತ್ರಾ ಮಲ್ಲೆಟ್ಟಿ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net