

ಮಡಿಕೇರಿ:
ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ ಕೋಡಂದೇರ ಬಾಂಡ್ ಗಣಪತಿ ಮತ್ತು ಉಪಾಧ್ಯಕ್ಷರಾಗಿ ಕೆಟೋಳಿರ ಹರೀಶ್ ಮತ್ತೊಮ್ಮೆ ಆಯ್ಕೆ ಆಗಿದ್ದಾರೆ. ಉಪವಿಭಾಗಾಧಿಕಾರಿ ವಿನಾಯಕ ನರ್ವಾಡೆ ಗುರುವಾರ ಚುನಾವಣೆ ಅಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಹಿಂದಿನ ಅವಧಿಯಲ್ಲೂ ಅಧ್ಯಕ್ಷ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಕೋಡಂದೇರ ಬಾಂಡ್ ಗಣಪತಿ ಮತ್ತು ಕೆಟೋಳಿರ ಹರೀಶ್ ಅವಿರೋಧವಾಗಿ ಆಯ್ಕೆಯಾದರು.