ಏ.೨೧ ರಿಂದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ

8adarshkdga1
Published on

ಮಡಿಕೇರಿ: ನಗರದ ನಾಲ್ಕು ಶಕ್ತಿ ದೇವತೆಗಳಲ್ಲೊಂದಾದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ ೧೬ನೇ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಏ.೨೧ ಮತ್ತು ೨೨ ರಂದು ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.


ಕೇರಳದ ಪಯ್ಯನೂರ್ ನ ಶ್ರೀ ಈಶ್ವರಿ ನಂಬೂದರಿರವರ ನೇತೃತ್ವದಲ್ಲಿ ಎರಡು ದಿನಗಳ ಕಾಲ ವಿವಿಧ ಧಾರ್ಮಿಕ ವಿಧಿ ವಿಧಾನಗಳು ಜರುಗಲಿದ್ದು, ಏ.೨೧ ರಂದು ಸಂಜೆ ೬ ಗಂಟೆಗೆ ಆಚಾರ್ಯರ ಆಗಮನ, ದೇವಾಲಯದಲ್ಲಿ ಪುಣ್ಯಾಹ ಶುದ್ಧಿ, ದೇವಿ ಪೂಜೆ, ಸುದರ್ಶನ ಹೋಮ ಮತ್ತು ಪ್ರಸಾದ ವಿತರಣೆ ನಡೆಯಲಿದೆ ಎಂದು ತಿಳಿಸಿದೆ.


ಏ.೨೨ ರಂದು ಬೆಳಿಗ್ಗೆ ೭ ಗಂಟೆಗೆ ಮಹಾ ಗಣಪತಿ ಹೋಮ, ಮಹಾ ಮೃತ್ಯುಂಜಯ ಹೋಮ, ಕಳಸ ಪೂಜೆ, ದೇವಿಗೆ ಅಭಿಷೇಕ, ಅಲಂಕಾರ ಪೂಜೆ ಹಾಗೂ ಮಹಾ ಪೂಜೆ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net