ಮರು ಪ್ರತಿಷ್ಠಾಪನಾ ಮಹೋತ್ಸವ ಇಂದು

Published on

ಸೋಮವಾರಪೇಟೆ: ಬಜೆಗುಂಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮರು ಪ್ರತಿಷ್ಠಾಪನಾ ಮತ್ತು ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಡಿ.25 ಮತ್ತು 26 ನಡೆಯಲಿದೆ.

ಸಮಿತಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ ಹಾಗೂ ಶಾಸಕ ಡಾ.ಮಂತರ್‌ಗೌಡ, ಸಮಿತಿ ಪದಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಪ್ರಧಾನ ಅರ್ಚಕ ಹರಿಕೃಷ್ಣನ್ ನಂಬೂದರಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ಜರುಗಲಿವೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net