ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ನಾಮಕರಣ ಪರಿಶೀಲನೆ ಭರವಸೆ

airport
Published on

ಬೆಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರಪುರುಷರಾದ ಕೋಟಿ ಚೆನ್ನಯ ಅವರ ಹೆಸರಿಡಬೇಕೆಂಬ ಒತ್ತಾಯಕ್ಕೆ ಸರ್ಕಾರ ಪರಿಶೀಲನೆ ನಡೆಸುವ ಭರವಸೆ ನೀಡಿದೆ.

ಮಂಗಳವಾರ ವಿಧಾನಸಭೆ ಅಧಿವೇಶನದ ಶೂನ್ಯ ವೇಳೆಯಲ್ಲಿ ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ವಿಷಯ ಪ್ರಸ್ತಾಪಿಸಿ, ‘ವೀರಪುರುಷ ಕೋಟಿ ಚೆನ್ನಯ ವಿಮಾನ ನಿಲ್ದಾಣ ಮಂಗಳೂರು’ ಎಂದು ಏರ್‌ಪೋರ್ಟ್‌ಗೆ ನಾಮಕರಣ ಮಾಡಬೇಕು. ಈ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಬೇಕೆಂದು ರ‌್ಯಾಲಿ, ಜಿಲ್ಲೆಯಲ್ಲಿ ಸಾಂವಿಧಾನಿಕ ಹೋರಾಟಗಳು ನಡೆಯುತ್ತಿವೆ ಎಂದು ತಿಳಿಸಿದರು. ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ಪರಿಶೀಲನೆ ಮಾಡಿ ಮುಂದುವರಿಯುತ್ತದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಉತ್ತರಿಸಿದರು.

ಹಾಗೆಯೇ ಉಡುಪಿಯಲ್ಲಿ ತುಳುಭವನ ನಿರ್ಮಿಸಿ ಎಂಬ ಕಾರ್ಕಳ ಶಾಸಕ, ಮುಖ್ಯ ಸಚೇತಕ ಸುನೀಲ್ ಕುಮಾರ್ ಕೋರಿಕೆಗೆ, ಮುಂದಿನ ಆಯವ್ಯಯದಲ್ಲಿ ಹಣ ಲಭ್ಯತೆ ಆಧರಿಸಿ ಮಾಡುತ್ತೇವೆ ಎಂದು ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net