ಸಂವಿಧಾನ ಓದು ಉತ್ತಮ ಕಾರ್ಯಕ್ರಮ

BP thippeswamy
Published on

ಹಿರಿಯೂರು: ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ಸಂವಿಧಾನ ಪ್ರಸ್ತಾವನೆ ಓದುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಕಾರ್ಯಕ್ರಮವನ್ನು ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಸೆ.15ರಂದು ಆಯೋಜಿಸಲಾಗಿದೆ ಎಂದು ಪ್ರಾಚಾರ್ಯ ಬಿ.ಪಿ.ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಹಲವಾರು ವೈವಿಧ್ಯ ಸಂಸ್ಕೃತಿಗಳನ್ನು ಒಟ್ಟಾಗಿ ಹಿಡಿದಿಟ್ಟು, ಭಾರತದಲ್ಲಿ ಏಕತೆ ಸಾಧಿಸಲು ಸಾಧ್ಯವಾಗಿರುವ ಭಾರತ ಸಂವಿಧಾನದ ಪ್ರಾಮುಖ್ಯತೆಯು ಅದರ ಪ್ರಸ್ತಾವನೆಯಲ್ಲಿ ಅಡಗಿದ್ದು, ಅದರ ಅರ್ಥವನ್ನು ಜನ ಸಾಮಾನ್ಯರಿಗೆ ತಿಳಿಸಲು ಇದೊಂದು ಮಹತ್ವಪೂರ್ಣ ಕಾರ್ಯಕ್ರಮವಾಗಿದೆ ಎಂದಿದ್ದಾರೆ.

ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ವಿವಿಧ ಶಾಲಾಕಾಲೇಜಿನ ವಿದ್ಯಾರ್ಥಿಗಳು, ಪಾಲಕರು, ಸಾರ್ವಜನಿಕರು, ಜನಪ್ರತಿನಿಧಿಗಳು ಹಾಗೂ ವಿವಿಧ ದಲಿತಪರ, ಕನ್ನಡಪರ ಸಂಘಟನೆಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net