ಓದಿನಿಂದ ವ್ಯಕ್ತಿತ್ವ ವಿಕಸನ ಸಾಧ್ಯ

gan (5)
Published on

ಕುಂದಾಪುರ: ವಿದ್ಯಾರ್ಥಿಗಳು ಕಾಲೇಜು ಹಂತದಲ್ಲಿಯೇ ಓದುವ ಹವ್ಯಾಸ ರೂಢಿಸಿಕೊಂಡರೆ ಅಂತರಂಗದ ಬೆಳೆವಣಿಗೆಯೊಂದಿಗೆ ಸರ್ವಾಂಗೀಣ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಉಡುಪಿ ಪೂರ್ಣಪ್ರಜ್ಞ ಕಾಲೇಜು ನಿವೃತ್ತ ಕನ್ನಡ ಪ್ರಾಧ್ಯಾಪಕ ಡಾ.ಶ್ರೀಕಾಂತ್ ರಾವ್ ಸಿದ್ದಾಪುರ ಅಭಿಪ್ರಾಯಪಟ್ಟರು.

ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಕುಂದಾಪುರ ಸರ್ಕಾರಿ ಪ್ರಥಮ ದರ್ಜೆೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆಂತರಿಕ ಗುಣಮಟ್ಟ ಭರವಸಾ ಕೋಶ, ಗ್ರಂಥಾಲಯ, ವಾಹಿತಿ ವಿಜ್ಞ್ಞಾನ ಕೇಂದ್ರದ ಆಶ್ರಯದಲ್ಲಿ ಡಾ.ಎಸ್.ಆರ್.ರಂಗನಾಥನ್ ಅವರ 133ನೇ ಜನ್ಮದಿನದ ಅಂಗವಾಗಿ ಹಮ್ಮಿಕೊಂಡ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆಯಲ್ಲಿ ವಾತನಾಡಿದರು.

ಓದು ಧನಾತ್ಮಕ ಚಿಂತನೆಗೆ ಕಾರಣವಾಗಿ ಸ್ಮರಣ ಶಕ್ತಿ ಹೆಚ್ಚಿಸಿ ವ್ಯಕ್ತಿತ್ವಕ್ಕೆ ಮೆರುಗು ತರುತ್ತದೆ. ವಿದ್ಯಾರ್ಥಿಗಳು ಗ್ರಂಥಾಲಯದ ಬಳಕೆಯಿಂದ ಸಂವಹನ ಕೌಶಲ, ಸೃಜನ ಶೀಲತೆ, ಭಾಷಾ ಪ್ರೌಢಿಮೆ ಹೊಂದಿ ಸರ್ವತೋಮುಖ ಬೆಳವಣಿಗೆ ಹೊಂದಬಹುದು ಎಂದರು.

ಕಾಲೇಜು ಪ್ರಾಂಶುಪಾಲ ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಚಾಲಕ ನಾಗರಾಜ ಯು., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ನಾಗರಾಜ ವೈದ್ಯ ಎಂ. ಉಪಸ್ಥಿತರಿದ್ದರು. ಗ್ರಂಥಪಾಲಕ ವೆಟರನ್ ರವಿಚಂದ್ರ ಎಚ್.ಎಸ್. ಸ್ವಾಗತಿಸಿದರು. ವಾಚನಾಲಯ ಸಮಿತಿ ವಿದ್ಯಾರ್ಥಿ ಪ್ರತಿನಿಧಿ ವಿದ್ಯಾ ಶೇಟ್ ಕಾರ್ಯಕ್ರಮ ನಿರೂಪಿಸಿದರು. ವೈಷ್ಣವಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net