ಗ್ರಾಮೀಣ ಮಕ್ಕಳಿಗೆ ಓದು ಬೆಳಕು ಶಿಬಿರ

9spt2¸
ಸೋಮವಾರಪೇಟೆ ಸಮೀಪದ ನೇರುಗಳಲೆ ಗ್ರಾಮ ಪಂಚಾಯಿತಿಯ ಗ್ರಂಥಾಲಯದಲ್ಲಿ ಆಯೋಜಿಸಿದ್ದ ಮಕ್ಕಳ ಬೇಸಿಗೆ ಶಿಬಿರವನ್ನು ಪಂಚಾಯಿತಿ ಅಧ್ಯಕ್ಷರೊಂದಿಗೆ ಶಿಬಿರಾರ್ಥಿ ಉದ್ಘಾಟಿಸಿದರು. ವಿನೋದ್, ಪುಷ್ಪ, ಪ್ರಕಾಶ್ ಇದ್ದರು.
Published on

ಸೋಮವಾರಪೇಟೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ವತಿಯಿಂದ ತಾಲೂಕಿನ ನೇರುಗಳಲೆ ಗ್ರಾಮ ಪಂಚಾಯಿತಿ ಅರಿವು ಕೇಂದ್ರದ ಡಿಜಿಟಲ್ ಗ್ರಂಥಾಲಯದಲ್ಲಿ ಗ್ರಾಮೀಣ ಮಕ್ಕಳಿಗೆ ಓದು ಬೆಳಕು ಕಾರ್ಯಕ್ರಮದಡಿ ಶಿಬಿರ ಗುರುವಾರ ನಡೆಯಿತು.

6 ರಿಂದ 16 ವರ್ಷದೊಳಗಿನ ಮಕ್ಕಳು ಶಿಬಿರದಲ್ಲಿ ಭಾಗವಹಿಸಿ ವಿವಿಧ ವಿಷಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನೋದ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ವಿದ್ಯಾರ್ಥಿಗಳು ಮೊಬೈಲ್ ಬಳಕೆ ಮಾಡಬಾರದು. ಉನ್ನತ ವ್ಯಾಸಂಗ ಮಾಡುವಾಗ ಮೊಬೈಲ್ ಫೋನ್ ಬಳಸಿದರೆ ಅಭ್ಯಂತರವಿಲ್ಲ. ಈಗ ಮೊಬೈಲ್ ಹುಚ್ಚು ಬೆಳೆಸಿಕೊಂಡರು ಅದೊಂದು ಕೆಟ್ಟ ಚಟವಾಗಿ ನಿಮ್ಮನ್ನು ಆವರಿಸಿಕೊಳ್ಳುತ್ತದೆ. ಪಾಲಕರು ಮಕ್ಕಳಿಗೆ ತಿಳಿಹೇಳಿಬೇಕು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪುಷ್ಪಾ ಮಾತನಾಡಿ, ನಿರಂತರ ಕಲಿಕೆಯಿಂದ ಮಾತ್ರ ಉತ್ತಮ ಅಂಕಗಳನ್ನು ಪಡೆಯಬಹುದು. ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿ ಹೆಚ್ಚಿನ ಪುಸ್ತಕಗಳನ್ನು ಓದಿ ಜ್ಞಾನ ಸಂಪಾದಿಸಿಕೊಳ್ಳಬೇಕು. ಪಂಚಾಯಿತಿ ಕಚೇರಿಗಳಲ್ಲಿ ಗ್ರಂಥಾಲಯಕ್ಕೆ ಭೇಟಿ ನೀಡಿ, ಓದುವ ಹವ್ಯಾಸವನ್ನು ಬೆಳಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ವೇದಿಕೆಯಲ್ಲಿ ಪಂಚಾಯಿತಿ ಸದಸ್ಯ ಪ್ರಕಾಶ್, ಗ್ರಂಥಾಲಯ ಮೇಲ್ವಿಚಾರಕಿ ಪದ್ಮಾವತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net