

ಬೆಟಗೇರಿ: ಗ್ರಾಪಂ ಗ್ರಂಥಾಲಯಗಳ ಮೂಲಕ ಮಕ್ಕಳ ಕಲಿಕೆಗೆ ಆಶಾಕಿರಣವಾಗುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿ ರಾಜ್ ಇಲಾಖೆ ಓದುವ ಬೆಳಕು ಕಾರ್ಯಕ್ರಮ ಅನುಷ್ಠಾನಕ್ಕೆ ತರಲು ಮುಂದಾಗಿದೆ ಎಂದು ತಾಲೂಕು ಪಂಚಾಯಿತಿ ಸದಸ್ಯ ಲಕ್ಷ್ಮಣ ನೀಲಣ್ಣವರ ಹೇಳಿದ್ದಾರೆ. ಗೋಕಾಕ ತಾಪಂ ಮತ್ತು ಬೆಟಗೇರಿ ಗ್ರಾಪಂ ಗ್ರಂಥಾಲಯದ ಸಹಯೋಗದಲ್ಲಿ ಶನಿವಾರ ಸ್ಥಳೀಯ ಗ್ರಾಪಂ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಗ್ರಂಥಾಲಯಗಳಲ್ಲಿ ಓದುವ ಬೆಳಕು ಅನುಷ್ಠಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಗ್ರಾಪಂ ಮಾಜಿ ಅಧ್ಯಕ್ಷ ಈಶ್ವರ ಬಳಿಗಾರ, ಮಕ್ಕಳಿಗೆ ಪುಸ್ತಕ ಹಾಗೂ ಸಿಹಿ ವಿತರಿಸಿದರು. ಗ್ರಂಥಾಲಯ ಮೇಲ್ವಿಚಾರಕ ಬಸವರಾಜ ಪಣದಿ. ಮುಖ್ಯ ಶಿಕ್ಷಕ ವೈ.ಸಿ.ಶೀಗಿಹಳ್ಳಿ, ಪಿಡಿಒ ಎಚ್.ಎನ್.ಬಾವಿಕಟ್ಟಿ, ಗೌಡಪ್ಪ ಮಾಳೇದ ಇತರರು ಇದ್ದರು.