

ನರಗುಂದ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪಟ್ಟಣದ ಶ್ರೀ ಸಿದ್ಧೇಶ್ವರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಸಭಾ ಭವನದಲ್ಲಿ ಸೆ. 15ರಂದು ಬೆಳಗ್ಗೆ 9.30ಕ್ಕೆ ಜಾಗತಿಕ ಮಟ್ಟದಲ್ಲಿ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತಾಲೂಕಿನ ಎಲ್ಲ ಇಲಾಖೆ ಅಧಿಕಾರಿ, ಸಿಬ್ಬಂದಿ, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ತಹಸೀಲ್ದಾರ ಶ್ರೀಶೈಲ ತಳವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.