ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಲು ಸಿದ್ಧ

Ready to respond to teacher issues
ಚಡಚಣದ ಸಂಗಮೇಶ್ವರ ಮಂಗಲ ಕಾರ್ಯಲಯದಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಶಾಸಕ ವಿಠ್ಠಲ ಕಟಕಧೋಂಡ ಮಾತನಾಡಿದರು. ಶಾಸಕ ಯಶವಂತರಾಯಗೌಡ ಪಾಟೀಲ, ಎ.ಎಸ್. ಸೊನ್ನಗಿ, ಎಸ್.ಎಸ್. ಪಾಟೀಲ, ಆರ್.ಡಿ. ಹಕ್ಕೆ ಇತರರಿದ್ದರು.
Published on

ಚಡಚಣ: ಸದೃಢ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಲು ನಾನು ಸದಾ ಸಿದ್ಧ ಎಂದು ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ಹೇಳಿದರು.

ಪಟ್ಟಣದ ಸಂಗಮೇಶ್ವರ ಮಂಗಲ ಕಾರ್ಯಾಲಯದಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಚಡಚಣ ಘಟಕದ ವತಿಯಿಂದ ಇತ್ತೀಚೆಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಇಂದು ಶಿಕ್ಷಕರನ್ನು ಶಿಕ್ಷಣ ಕಲಿಸಲು ಬಿಡದೆ ಬೇರೆ ಕೆಲಸಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿರುವುದು ವಿಪರ್ಯಾಸವಾಗಿದೆ. ಶಿಕ್ಷಕರ ಏಳನೇ ವೇತನ ಆಯೋಗದ ವರದಿಯ ಕುರಿತು ಮುಖ್ಯಮಂತ್ರಿಗಳು ಸೂಕ್ತ ಸಮಯದಲ್ಲಿ ನಿರ್ಧಾರ ಕೈಕೊಳ್ಳಲಿದ್ದಾರೆ ಎಂದರು.

ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿ, ಚಡಚಣ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಟನೆ ವಿಶೇಷ ಆಸಕ್ತಿ ಇರುವ ಸಂಘಟನೆಯಾಗಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಬದಲಾವಣೆ ತರುವ ಕೆಲಸ ಮುಂದುವರೆಸಿಕೊಂಡು ಹೋಗಬೇಕು ಎಂದರು.

ಕಾತ್ರಾಳ ಗುರುದೇವಾಶ್ರಮದ ಅಮೃತಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಿಕ್ಷಕರ ಸಂಘದ ಅಧ್ಯಕ್ಷ ಎ.ಎಸ್. ಸೊನ್ನಗಿ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಎಸ್. ಪಾಟೀಲ, ಕಾಂಗ್ರೆಸ್ ಮಂಡಲ ಅಧ್ಯಕ್ಷ ಆರ್.ಡಿ. ಹಕ್ಕೆ, ವಿವಿಧ ಶಿಕ್ಷಕ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ಶಿಕ್ಷಕ ಗುರು ಜೇವೂರ, ಸುನೀಲ ಯಳಮೇಲಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net