ಸಂವಿಧಾನದ ಆಶೋತ್ತರ ಅರಿತು ಜೀವನದಲ್ಲಿ ಅಳವಡಿಸಿ

mysore
Published on

ಮೈಸೂರು: ಸಂವಿಧಾನ ಜಾರಿಗೆ ಬಂದು 75 ವರ್ಷಗಳಾಗಿದ್ದು, ಪ್ರತಿಯೊಬ್ಬರಿಗೂ ಅರಿವು ಮೂಡಿಸುವುದು ಸರ್ಕಾರದ ಆಶಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಹೇಳಿದರು.


ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಪುರಭವನದ ಬಳಿ ಆಟೋ ಚಾಲಕರಿಂದ ಆಯೋಜಿಸಿದ್ದ ಆಟೋ ರ‌್ಯಾಲಿಗೆ ಚಾಲನೆ ನೀಡಿ ಮಾತನಾಡಿದರು.


ಸಂವಿಧಾನದ ಮಹತ್ವ ಹಾಗೂ ಆಶೋತ್ತರಗಳನ್ನು ಪ್ರತಿಯೊಬ್ಬರೂ ತಿಳಿದುಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಂವಿಧಾನದ ಮಹತ್ವವನ್ನು ತಿಳಿಯಲು ಪೀಠಿಕೆಯನ್ನು ಪ್ರತಿಯೊಬ್ಬರಿಗೂ ತಲುಪಿಸಬೇಕು ಎಂಬ ಉದ್ದೇಶದಿಂದ ಈ ಜಾಥಾವನ್ನು ಎಲ್ಲ ಕಡೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಮೊದಲು ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಡಿಸಿ ಪುಷ್ಪಾರ್ಚನೆ ನೆರವೇರಿಸಿದರು. ನಂತರ ಸಂವಿಧಾನ ಪೀಠಿಕೆಯನ್ನು ಬೋಧನೆ ಮಾಡಿದರು.

ಜಿಪಂ ಸಿಇಒ ಕೆ.ಎಂ.ಗಾಯತ್ರಿ, ಜಂಟಿ ಕೃಷಿ ನಿರ್ದೇಶಕ ಚಂದ್ರಶೇಖರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಂಗೇಗೌಡ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net