ಸಾರ್ವಜನಿಕರಿಂದ ದೂರು ಸ್ವೀಕಾರ

Application_new
Published on

ಮೈಸೂರು: ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಅಧಿಕಾರಿಗಳಿಂದ ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಹಣದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಸಂಬoಧಪಟ್ಟ ಸಾರ್ವಜನಿಕ/ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಕ್ರಮಬದ್ಧವಾಗಿ ಭರ್ತಿಮಾಡಿದ ದೂರುಗಳನ್ನು ಅಗತ್ಯ ದಾಖಲಾತಿಗಳೊಡನೆ ಸ್ವೀಕರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳಲಾಗಿದೆ.

ಕಾರ್ಯಕ್ರಮವು ಜುಲೈ 10 ರಂದು ಬೆಳಿಗ್ಗೆ 11 ಗಂಟೆಯಿoದ ಮದ್ಯಾಹ್ನ 1 ಗಂಟೆಯವರೆಗೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ತಾಲೂಕು ಪಂಚಾಯತ್‌ನ ಕಾರ್ಯನಿರ್ವಾಹಕಾಧಿಕಾರಿಗಳ ಕಚೇರಿಯಲ್ಲಿ, ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲ್ಲೂಕಿನ ಸರ್ಕಾರಿ ಪ್ರವಾಸಿ ಮಂದಿರದಲ್ಲಿ, ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ತಾಲೂಕು ಕಚೇರಿಯಲ್ಲಿ ಹಾಗೂ ಜುಲೈ 12 ರಂದು ಮಡಿಕೇರಿ ತಾಲ್ಲೂಕಿನ ತಾಲ್ಲೂಕು ಕಚೇರಿಯಲ್ಲಿ ನಡೆಯಲಿದೆ.

 ಸಾರ್ವಜನಿಕರು, ಕರ್ತವ್ಯ ಲೋಪವೆಸಗುವ ಭ್ರಷ್ಟ ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ದೂರು ನೀಡಿ ಕಾನೂನು ಕ್ರಮ ತೆಗೆದುಕೊಳ್ಳಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಮೈಸೂರು ವಿಭಾಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕ್ಷರಾದ ಸಜಿತ್ ವಿ.ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net