

ವಿಜಯವಾಣಿ ಸುದ್ದಿಜಾಲ ಧಾರವಾಡ
ಹುಬ್ಬಳ್ಳಿ- ಧಾರವಾಡ ಪಶ್ಚಿಮ ಮತ್ತು ಧಾರವಾಡ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಕೊಳಚೆ ಪ್ರದೇಶಗಳಿಗೆ ಕರ್ನಾಟಕ ಕೊಳಚೆ ಪ್ರದೇಶಗಳ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು. ಇಲ್ಲಿನ ಚಂದ್ರಕಾAತ ಬೆಲ್ಲದನಗರಕ್ಕೆ ಭೇಟಿ ನೀಡಿ ಕೊಳಚೆ ಪ್ರದೇಶಗಳ ಪರಿವೀಕ್ಷಣೆ ಮಾಡಿದರು. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾಮಗಾರಿ ಹಾಗೂ ಇನ್ನಿತರ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.
ಕುಡಿಯುವ ನೀರು, ವಿದ್ಯುತ್ ಹಾಗೂ ಒಳಚರಂಡಿ ಸಮಸ್ಯೆಗಳನ್ನು ತಿಳಿಸಿದರು. ಸಾರ್ವಜನಿಕರು ಕುಂದುಕೊರತೆಗಳನ್ನು ಆಲಿಸಿದ ಅವರು, ಸಮಸ್ಯೆಗಳನ್ನು ತುರ್ತಾಗಿ ಇತ್ಯರ್ಥಪಡಿಸಬೇಕು ಎಂದು ಸೂಚಿಸಿದರು. ಮಂಡಳಿಯ ಆಯುಕ್ತರು ಹಾಗೂ ವಿವಿಧ ಇಲಾಖೆಗಳ ಅಽಕಾರಿಗಳು ಉಪಸ್ಥಿತರಿದ್ದರು.