

ಪಾಂಡವಪುರ: ತಾಲೂಕು ಕಚೇರಿಯಲ್ಲಿ ಜು.10ರಂದು ಮಂಡ್ಯ ಲೋಕಾಯುಕ್ತ ವಿಭಾಗದ ಅಧಿಕಾರಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
ಸರ್ಕಾರಿ ಮತ್ತು ಅರೆಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಸರ್ಕಾರಿ ಕೆಲಸ ಮಾಡಿಕೊಡಲು ಅನಗತ್ಯ ವಿಳಂಬ ಹಾಗೂ ಭ್ರಷ್ಟಾಚಾರದ ಬಗ್ಗೆ ಅಂದು ಬೆಳಗ್ಗೆ 11ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ದೂರು ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.