ಅಂಗವಿಕಲ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸಿ

bdm 3-2
ಬಾದಾಮಿಯ ಸರ್ಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮದಲ್ಲಿ ಬಿಇಒ ಕೇಶವ ಪೆಟ್ಲೂರ ಮಾತನಾಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ. ದೊಡ್ಡಪ್ಪನ್ನವರ, ದೈಹಿಕ ಶಿಕ್ಷಣ ಪರಿವೀಕ್ಷಕ ಬಸವರಾಜ ಹಳಗೇರಿ, ಶಿಕ್ಷಣ ಸಂಯೋಜಕ ಬಿ.ಕೆ. ಚಿಮಲ್ ಇತರರಿದ್ದರು.
Published on

ಬಾದಾಮಿ: ಅಂಗವಿಕಲ ಮಕ್ಕಳನ್ನು ಪ್ರೋತ್ಸಾಹಿಸಿ ಸಾಧನೆ ಮಾಡಿದವರನ್ನು ಗುರುತಿಸಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ವಾಮನ ಪೆಟ್ಲೂರ ಹೇಳಿದರು.

ಸ್ಥಳೀಯ ಸರ್ಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅಂಗವಿಕಲ ಮಕ್ಕಳಲ್ಲಿ ಅಗಾಧ ಪ್ರತಿಬೆ ಇರುತ್ತದೆ. ಅವರಿಗೆ ಸೂಕ್ತ ವೇದಿಕೆ ನೀಡಿ ಪ್ರೋತ್ಸಾಹಿಸಬೇಕಾಗಿದೆ. ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಅಂಗವಿಕಲ ಮಕ್ಕಳಿಗೆ ವೈದ್ಯಕೀಯ ತಪಾಸಣೆ ನಡೆಸಿ ಸಾಧನ ಸಲಕರಣೆ ನೀಡಲಾಗುತ್ತದೆ. ಬಹುವಿಕಲತೆ ಹೊಂದಿದ ಅಂಗವಿಕಲರಿಗೆ ಪಿಜಿಯೋಥೆರಪಿ ಮಾಡಿಸಲಾಗುತ್ತಿದ್ದು, ಅರ್ಹರು ಇದರ ಸೌಲಭ್ಯ ಪಡೆದುಕೊಳ್ಳಬೇಕು ಎಂದರು.

ಸಾಧಕರಾದ ಪ್ರಸಿದ್ಧ ಕ್ರೀಡಾಪಟು ವಿಶ್ವನಾಥ ಕಿರೆಸೂರ, ಶಿಕ್ಷಣ ಸಂಯೋಜಕ ಬಿ.ಟಿ. ಹಳ್ಳಿ ಅವರನ್ನು ಸನ್ಮಾನಿಸಲಾಯಿತು.

ಅಂಗವಿಕಲ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಿಸಲಾಯಿತು. ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ. ದೊಡ್ಡಪ್ಪನ್ನವರ, ದೈಹಿಕ ಶಿಕ್ಷಣ ಪರಿವೀಕ್ಷಕ ಬಸವರಾಜ ಹಳಗೇರಿ, ಶಿಕ್ಷಣ ಸಂಯೋಜಕ ಬಿ.ಕೆ. ಚಿಮಲ್, ವೈ.ಬಿ. ಚಲವಾದಿ, ಎಸ್.ಎಸ್. ಚೌಕದ, ಎನ್.ಡಿ. ಬೀಳಗಿ, ಎಚ್.ಆರ್. ಕಡಿವಾಲ, ವಿ.ಎಚ್. ಮಡಿವಾಳರ ಹಾಜರಿದ್ದರು.

ಮುಖ್ಯಶಿಕ್ಷಕ ಬಿ.ಎಸ್. ಕರಡಿ ಸ್ವಾಗತಿಸಿದರು. ಎಸ್.ಎಸ್. ಚೌಕದ ಕಾರ್ಯಕ್ರಮ ನಿರೂಪಿಸಿದರು. ಎನ್.ಡಿ. ಬೀಳಗಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net