

ದೇವದುರ್ಗ: ವಿದ್ಯಾರ್ಥಿಯಲ್ಲಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಶಿಕ್ಷಕರು ಮಾಡಬೇಕು ಎಂದು ಸಿಆರ್‌ಪಿ ವೀರಭದ್ರಯ್ಯ ಹೇಳಿದರು.
ತಾಲೂಕಿನ ಮಸರಕಲ್ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿದರು.
ಇದನ್ನೂ ಓದಿ; ಮಕ್ಕಳ ಪ್ರತಿಭೆಗೆ ವೇದಿಕೆ ಪ್ರತಿಭಾ ಕಾರಂಜಿ
ಪ್ರತಿಭಾ ಕಾರಂಜಿ ಕಲೆ, ಸಾಹಿತ್ಯ, ಬುದ್ಧಿಮತ್ತೆ ಸೇರಿ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದೆ. ಮಕ್ಕಳಿಗೆ ಸಿಗುವ ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ತಾಲೂಕಿನ ಹಲವು ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಮೂಲಕ ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ.
ಶಿಕ್ಷಕರು ಮಕ್ಕಳಿಗೆ ಉತ್ತಮ ಮಾರ್ಗದರ್ಶನ ಮಾಡಿ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ. ಪಠ್ಯೇತರ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಂಡು ಮಾನಸಿಕ ಹಾಗೂ ದೈಹಿಕ ಸಾಮರ್ಥ್ಯ ವೃದ್ಧಿಸಿಕೊಳ್ಳಬೇಕು ಎಂದರು.
ಗ್ರಾಪಂ ಅಧ್ಯಕ್ಷೆ ನೂರ್ ಜಹಾನ್, ಎಸ್ಡಿಎಂಸಿ ಅಧ್ಯಕ್ಷ ಚಂದ್ರಶೇಖರ್, ಗ್ರಾಪಂ ಸದಸ್ಯ ಸಿದ್ದರಾಮ ರೆಡ್ಡಿ, ಪ್ರಮುಖರಾದ ಬಸವರಾಜ್ ಪಾಟೀಲ್, ಇಬ್ರಾಹಿಂ, ಶ್ರೀನಿವಾಸ್, ಶಶಿಕಲಾ, ಗಂಗಣ್ಣ, ನಾಗರೆಡ್ಡಿ, ಕಾಶಿಂ ಅಲಿ, ನಾಜಿಯಾ ಬೇಗಂ ಇತರರಿದ್ದರು.