ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ

brahman keshwapur
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಮಕ್ಕಳಲ್ಲಿರುವ ಹಿಂಜರಿಕೆ ಹೋಗಲಾಡಿಸಿ, ಅವರಲ್ಲಿ ಅಂತರ್ಗತವಾದ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿದಾಗ ಅವರು ಬದುಕಿನಲ್ಲಿ ಯಶಸ್ವಿಯಾಗುತ್ತಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಹುಬ್ಬಳ್ಳಿ ಕೇಶ್ವಾಪುರ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘ ಭಾನುವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ವಿದ್ಯಾವಂತರಾಗುವುದರೊಂದಿಗೆ ಸಂಸ್ಕೃತಿ, ಸಂಸ್ಕಾರಗಳನ್ನು ರೂಢಿಸಿಕೊಳ್ಳಲು ಕರೆ ನೀಡಿದರು.

ಸ್ವರ್ಣ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ. ವಿ.ಎಸ್.ವಿ. ಪ್ರಸಾದ ಮಾತನಾಡಿ, ಸಮಾಜದ ಋಣ ತೀರಿಸುವ ಜವಾಬ್ದಾರಿ ಮಕ್ಕಳ ಮೇಲಿದ್ದು, ನಿಮ್ಮ ಪ್ರತಿಭೆ ಮತ್ತೊಬ್ಬರಿಗೆ ಪ್ರೇರಣೆಯಾಗಬೇಕು ಎಂದರು.

ಕ್ಷಮತಾ ಸೇವಾ ಸಂಸ್ಥೆಯ ಅಧ್ಯಕ್ಷ ಗೋವಿಂದ ಜೋಶಿ ಮಾತನಾಡಿ, ಮಕ್ಕಳು ಅಂಕಗಳ ಮಾಯಾಜಾಲಕ್ಕೆ ಸಿಲುಕದಂತೆ ಪಾಲಕರು ನೋಡಿಕೊಳ್ಳಬೇಕು ಹಾಗೂ ಶಿಕ್ಷಣವಲ್ಲದೇ ಇನ್ನಿತರ ಕ್ಷೇತ್ರಗಳಲ್ಲೂ ಯುವಜನತೆ ತಮ್ಮ ಪ್ರತಿಭೆಯನ್ನು ಸದ್ವಿನಿಯೋಗ ಮಾಡಿಕೊಂಡಾಗ ಸದೃಢ ಸಮಾಜ ನಿರ್ವಣವಾಗಲಿದೆ ಎಂದರು.

ಪಾಲಿಕೆ ಸದಸ್ಯರಾದ ಬೀರಪ್ಪ ಖಂಡೇಕಾರ, ಉಮಾ ಮುಕುಂದ ಇದ್ದರು. 34 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಹಾಗೂ ನಗದು ಪುರಸ್ಕಾರ ವಿತರಿಸಲಾಯಿತು. ಸುನಿಲ ಗುಮಾಸ್ತೆ ಅಧ್ಯಕ್ಷತೆ ವಹಿಸಿದ್ದರು. ರಾಘವೇಂದ್ರ ಗುಡಿ, ವಿಲಾಸ ಕೊಣ್ಣೂರ, ಭೀಮಾಜಿ ಕುಲಕರ್ಣಿ, ಕೃಷ್ಣ ಕುಲಕರ್ಣಿ, ಮನೋಹರ ಪರ್ವತಿ, ಪ್ರದೀಪ ಜೋಶಿ, ವೆಂಕಟೇಶ ದಿವಾಣಜಿ, ಧೀರೇಂದ್ರ ಬಾಗಲಕೋಟೆ ಇದ್ದರು.

ಲಕ್ಷ್ಮೀದೇವಿ ಪರ್ವತೀಕರ ಪ್ರಾರ್ಥಿಸಿದರು. ಕಾರ್ಯದರ್ಶಿ ಪ್ರಹ್ಲಾದ ಪರ್ವತಿ ಸ್ವಾಗತಿಸಿದರು. ಮನೋಜ ಪರ್ವತೀಕರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net