ಶಿಕ್ಷಕರ ಸೇವೆ ಗುರುತಿಸಿ ಗೌರವಿಸುವುದರೆ ಮತ್ತಷ್ಟು ಉತ್ತೇಜನ

KDR2
ಕೇದಿಗೆರೆ ಶಾಲೆಯಲ್ಲಿ ಶಿಕ್ಷಕರಾದ ಎಚ್.ಬಿ.ಲತಾ, ಬಿ.ಎಸ್.ಲೋಕೇಶಪ್ಪ ಅವರಿಗೆ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬಿಇಒ ಆರ್.ಸಿದ್ದರಾಜನಾಯ್ಕ, ಶ್ರೀನಿವಾಸ್, ಬಿ.ಪಿ.ಲಿಂಗರಾಜು ಇತರರಿದ್ದರು.
Published on

ಕಡೂರು: ಸೇವೆ ಗುರುತಿಸಿ ಗೌರವಿಸುವುದರಿಂದ ಶಿಕ್ಷಕರಿಗೆ ಮತ್ತಷ್ಟು ಉತ್ತೇಜನ ನೀಡಿದಂತಾಗಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಸಿದ್ದರಾಜನಾಯ್ಕ ಹೇಳಿದರು.

ಕೇದಿಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಹಿರೇನಲ್ಲೂರು ಹಾಗೂ ಬಿಸಿಲೆರೆ ಕ್ಲಸ್ಟರ್‌ಮಟ್ಟದ ಗುರುವಂದನೆ ಮತ್ತು ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕ್ಲಸ್ಟರ್‌ಮಟ್ಟದಲ್ಲಿ ಉತ್ತಮ ಶಾಲೆ ಮತ್ತು ಉತ್ತಮ ಶಿಕ್ಷಕರನ್ನು ಗುರುತಿಸುತ್ತಿರುವುದು ವಿಶೇಷ. ಒಳ್ಳೆಯ ಕೆಲಸ ಮಾಡುವವರನ್ನು ಗುರುತಿಸುವಂತಾಗಬೇಕು. ಈ ಪದ್ಧತಿ ಎಲ್ಲ ಕ್ಲಸ್ಟರ್‌ಗಳಲ್ಲಿ ಆರಂಭಗೊಂಡರೆ ಶಿಕ್ಷಕರು ಮತ್ತಷ್ಟು ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ಬಿಆರ್‌ಸಿ ಬಿ.ಟಿ.ಪ್ರೇಮ್‌ಕುಮಾರ್ ಮಾತನಾಡಿ, ಇದೊಂದು ವಿಶೇಷ ಮತ್ತು ವಿನೂತನ ಕಾರ್ಯಕ್ರಮ. ಕ್ಲಸ್ಟರ್‌ಮಟ್ಟದಲ್ಲಿ ಪ್ರಶಸ್ತಿ ಪಡೆದ ಶಿಕ್ಷಕರು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆಯುವಂತಾಗಲಿ ಎಂದು ಆಶಿಸಿದರು.
ಹಿರೇನಲ್ಲೂರು ಕ್ಲಸ್ಟರ್ ವ್ಯಾಪ್ತಿಯಲ್ಲಿ ಸೀಗೆಹಡ್ಲು, ಬಿಸಿಲೆರೆ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬಿಸಿಲೆರೆ ಪ್ರಾಥಮಿಕ ಶಾಲೆಗೆ ಉತ್ತಮ ಶಾಲೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾಮನಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಎಚ್.ಬಿ.ಲತಾ, ಜಿ.ಕೆ.ಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಬಿ.ಎಸ್.ಲೋಕೇಶಪ್ಪ ಅವರಿಗೆ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಎರಡೂ ಕ್ಲಸ್ಟರ್‌ಗಳಿಂದ ವರ್ಗಾವಣೆಗೊಂಡ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಬಿಸಿಲೆರೆ ಕ್ಲಸ್ಟರ್ ಸಿಆರ್‌ಪಿ ಶ್ರೀನಿವಾಸ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಮಲ್ಲಿಕಾರ್ಜುನ್, ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಪಿ.ಲಿಂಗರಾಜು, ಕಾರ್ಯದರ್ಶಿ ಜಿ.ತಿಮ್ಮಪ್ಪ, ದೈಹಿಕ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಲತಾಮಣಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net