ಬಿಜೆಪಿಯಿಂದ ಉಚ್ಚಾಟನೆಗೆ ಶಿಫಾರಸು

bjp office
ಶಿವಮೊಗ್ಗ ಬಿಜೆಪಿ ಜಿಲ್ಲಾ ಕಾರ್ಯಾಲಯ
Published on

ಶಿವಮೊಗ್ಗ: ಬಿಜೆಪಿ ಅಭ್ಯರ್ಥಿ ವಿರುದ್ಧ ಬಂಡಾಯವೆದ್ದು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿ ವಾರ ಕಳೆದ ಬಳಿಕ ಈಗ ಅವರ ಬೆನ್ನಿಗೆ ನಿಂತಿರುವ ಬಿಜೆಪಿ ಪದಾಧಿಕಾರಿಗಳು, ಪಕ್ಷದಿಂದ ಪಾಲಿಕೆ ಸದಸ್ಯರಾಗಿ, ಮೇಯರ್, ಉಪಮೇಯರ್ ಆದವರ ಉಚ್ಚಾಟನೆಗೂ ವೇದಿಕೆ ಸಿದ್ಧವಾಗುತ್ತಿದೆ.

ಒಟ್ಟು 10 ಮಂದಿಯನ್ನು ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಅವಧಿಗೆ ಉಚ್ಚಾಟನೆ ಮಾಡುವಂತೆ ಬಿಜೆಪಿ ನಗರಾಧ್ಯಕ್ಷ ಡಿ.ಮೋಹನ್ ರೆಡ್ಡಿ ಅವರು ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಅವರಿಗೆ ಪತ್ರ ಬರೆದಿದ್ದಾರೆ. ಮಾಜಿ ಮೇಯರ್ ಲತಾ ಗಣೇಶ್, ಸುವರ್ಣಾ ಶಂಕರ್, ಮಾಜಿ ಉಪಮೇಯರ್ ಲಕ್ಷ್ಮೀ ಶಂಕರನಾಯ್ಕ, ಶಂಕರ್ ಗನ್ನಿ ಅವರ ಹೆಸರು ಶಿಫಾರಸು ಪತ್ರದಲ್ಲಿದೆ.
ನಗರ ಪಾಲಿಕೆ ಮಾಜಿ ಸದಸ್ಯರಾದ ಇ.ವಿಶ್ವಾಸ್, ಎಸ್.ಜಿ.ರಾಜು, ಆರತಿ ಪ್ರಕಾಶ್, ಜಿಪಂ ಮಾಜಿ ಸದಸ್ಯ ಕೆ.ಇ.ಕಾಂತೇಶ್, ನಗರ ಉಪಾಧ್ಯಕ್ಷ ಮೋಹನ್ ರಾವ್ ಜಾಧವ್, ಸಹ್ಯಾದ್ರಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅನಿತಾ ಮಂಜುನಾಥ್ ಅವರನ್ನು ಉಚ್ಚಾಟನೆ ಮಾಡುವಂತೆ ಮೋಹನ್ ರೆಡ್ಡಿ ಶಿಫಾರಸು ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net