ಶಾಸಕರಿಬ್ಬರ ಉಚ್ಛಾಟನೆಗೆ ಶಿಫಾರಸ್ಸು

New LIMPA New
Published on

ಹುಬ್ಬಳ್ಳಿ : ಶಾಸಕರಾದ ಎಸ್.ಟಿ. ಸೋಮಶೇಖರ ಹಾಗೂ ಶಿವರಾಮ ಹೆಬ್ಬಾರ ಅವರು ಪಕ್ಷದ ಶಿಸ್ತು ಉಲ್ಲಂಘಿಸಿರುವ ಬಗ್ಗೆ ಇಬ್ಬರಿಗೂ ಎರಡು ಬಾರಿ ನೋಟಿಸ್ ನೀಡಿದ್ದು, ಪಕ್ಷದ ಹೈ ಕಮಾಂಡ್​ಗೆ ವರದಿಯನ್ನೂ ಸಲ್ಲಿಸಲಾಗಿದೆ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ನಂತರ ಹಾಗೂ ಕಳೆದ ಎರಡು ತಿಂಗಳ ಹಿಂದೆ ಒಟ್ಟು ಎರಡು ಬಾರಿ ಇಬ್ಬರೂ ಶಾಸಕರು ಪಕ್ಷದ ಶಿಸ್ತು ಉಲ್ಲಂಘಿಸಿರುವ ಬಗ್ಗೆ ವರದಿ ಸಲ್ಲಿಸಲಾಗಿದೆ. ಇಬ್ಬರೂ ಶಾಸಕರನ್ನು ಪಕ್ಷದಿಂದ ಉಚ್ಛಾಟಿಸಲು ವರದಿಯಲ್ಲಿ ಶಿಫಾರಸ್ಸು ಮಾಡಿದ್ದಾಗಿ ಹೇಳಿದರು.

ಶಿಸ್ತು ಸಮಿತಿ ಅಧ್ಯಕ್ಷರಾಗಿರುವ ತಮಗೆ ಪಕ್ಷದ ಯಾವುದೇ ಶಾಸಕರಾಗಲಿ ಅಥವಾ ಇನ್ನಿತರರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಇಲ್ಲ. ಪಕ್ಷದ ಶಿಸ್ತು ಉಲ್ಲಂಘನೆಯಾಗಿರುವ ಬಗ್ಗೆ ತನಿಖೆ ನಡೆಸಿ, ವರದಿ ಕೊಡುವುದಷ್ಟೇ ನನ್ನ ಕೆಲಸ. ಮುಂದಿನ ಕ್ರಮವನ್ನು ಪಕ್ಷದ ಹೈಕಮಾಂಡ್ ಕೈಗೊಳ್ಳುತ್ತದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net