ಜೆಟ್ಟಿ ಪುನರ್ ನಿರ್ಮಾಣಕ್ಕೆ 12 ಕೋಟಿ ರೂ. ಮಂಜೂರು, ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿಕೆ

jetty
Published on

ಗಂಗೊಳ್ಳಿ: ಗಂಗೊಳ್ಳಿ ಮೀನುಗಾರಿಕಾ ಬಂದರಿನ ಜೆಟ್ಟಿ ಪುನರ್ ನಿರ್ಮಾಣಕ್ಕೆ 12 ಕೋಟಿ ರೂ. ಮಂಜೂರಾಗಿದ್ದು, ಆದಷ್ಟು ಶೀಘ್ರ ಕಾಮಗಾರಿ ಆರಂಭವಾಗಲಿದೆ. ಬ್ರೇಕ್ ವಾಟರ್ ಕಾಮಗಾರಿಯಲ್ಲಿ ಉಳಿದ 1.35 ಕೋಟಿ ರೂ. ಹರಾಜು ಪ್ರಾಂಗಣ ನಿರ್ಮಾಣಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು.

ನೆಟ್‌ಫಿಶ್-ಎಂಪಿಡಾ, ಮೀನುಗಾರಿಕಾ ಇಲಾಖೆ, ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆ ಮತ್ತು ವಿವಿಧ ಮೀನುಗಾರಿಕಾ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ಬಂದರು ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಅಂಜನಾದೇವಿ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯೆ ಶೋಭಾ ಜಿ.ಪುತ್ರನ್, ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಕರಾವಳಿ ಕಾವಲು ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ನಂಜಪ್ಪ, ಪ್ರಾಥಮಿಕ ಮೀನುಗಾರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಹಸಿಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ವಾಸುದೇವ ಶಿಪಾ, ಕೊಂಕಣಿ ಖಾರ್ವಿ ಮಾರ್ಕೆಟಿಂಗ್ ಸಮಿತಿ ಅಧ್ಯಕ್ಷ ಸೌಪರ್ಣಿಕ ಬಸವ ಖಾರ್ವಿ, ಮೀನುಗಾರ ಮುಖಂಡರಾದ ನಾರಾಯಣ, ರಮೇಶ ಕುಂದರ್, ಮೀನುಗಾರಿಕಾ ಇಲಾಖೆಯ ಗೋಪಾಲಕೃಷ್ಣ, ಶ್ರುತಿ, ಪ್ರತೀಕ್ಷಾ, ಸರಸ್ವತಿ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net