ಆಸ್ಪತ್ರೆ ಸೇರಿದ್ದವರ ಆರೋಗ್ಯದಲ್ಲಿ ಚೇತರಿಕೆ

Published on

ಮದ್ದೂರು: ತಾಲೂಕಿನ ಗಟ್ಟಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಚಿಕಿತ್ಸೆ ಪಡೆಯುತ್ತಿದ್ದವರ ಆರೋಗ್ಯದಲ್ಲಿ ಬಹುತೇಕ ಚೇತರಿಕೆ ಕಂಡು ಬಂದಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ರವೀಂದ್ರ ಬಿ.ಗೌಡ ತಿಳಿಸಿದ್ದಾರೆ.

ಕಲುಷಿತ ನೀರು ಸೇವನೆಯಿಂದ ಅಂದಾಜು 21 ಮಂದಿಗೆ ವಾಂತಿ, ಭೇದಿಯಾಗಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಎಲ್ಲರೂ ಆರೋಗ್ಯವಾಗಿದ್ದು, ಕುಡಿಯುವ ನೀರನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಇದರ ವರದಿ ಇನ್ನು ಬಂದಿಲ್ಲ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net