13 ಸಾವಿರ ಶಿಕ್ಷಕರ ನೇಮಕಾತಿ, ಡಿ.7ರಂದು ಟಿಇಟಿ

Madhu bangarappa
Published on

ಶಿವಮೊಗ್ಗ: ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಸಂಬಂಧ 13 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಅದಕ್ಕಾಗಿ ಅರ್ಹ ಪದವೀಧರರಿಗೆ ಡಿ.7ರಂದು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ನಡೆಸಲು ಇಲಾಖೆಯು ಅ.23ರಂದು ಅಧಿಸೂಚನೆ ಹೊರಡಿಸಲಿದೆ. ಅರ್ಹ ಪದವೀಧರರು ನ.9ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದರು.

ಪ್ರಸ್ತುತ ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡು ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಅಡಚಣೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ. ಎಸ್‌ಎಸ್‌ಎಲ್‌ಸಿ ಉತ್ತೀರ್ಣ ಅಂಕಗಳನ್ನು 35ರಿಂದ 33 ಅಂಕಗಳಿಗೆ ಇಳಿಸಲಾಗಿದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net