ಮಂಡ್ಯ ಕೃಷಿ ಇಲಾಖೆಯಲ್ಲಿ ಐದು ಹುದ್ದೆ ಖಾಲಿ: ನೇರ ಗುತ್ತಿಗೆ ಆಧಾರದಲ್ಲಿ ನೇಮಕಾತಿ

Job
Published on

ಮಂಡ್ಯ: ಜಂಟಿ ಕೃಷಿ ನಿರ್ದೇಶಕರ ಅಧೀನಕ್ಕೆ ಒಳಪಡುವ ಕಚೇರಿಯಲ್ಲಿ 2024-25ನೇ ಸಾಲಿಗೆ ಆತ್ಮ ಯೋಜನೆಯಡಿ ನೇರಗುತ್ತಿಗೆ ಆಧಾರದ ಮೇರೆಗೆ ತಾಲೂಕು ತಾಂತ್ರಿಕ ವ್ಯವಸ್ಥಾಪಕರು-3 ಮತ್ತು ಸಹಾಯಕ ತಾಂತ್ರಿಕ ವ್ಯವಸ್ಥಾಪಕರು-2 ಹುದ್ದೆಗೆ ತಾತ್ಕಾಲಿಕವಾಗಿ ನೇರಗುತ್ತಿಗೆ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ತಾಲೂಕು ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಕೃಷಿ/ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಜತೆಗೆ ಕಂಪ್ಯೂಟರ್ ಜ್ಞಾನ ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳಲ್ಲಿ ಕನಿಷ್ಟ 2 ವರ್ಷಗಳ ಕ್ಷೇತ್ರಮಟ್ಟದಲ್ಲಿ ಕರ್ತವ್ಯ ಸಲ್ಲಿಸಿದ ಸೇವಾ ಅನುಭವ ಹೊಂದಿದ ಮತ್ತು ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಕೃಷಿ/ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದು ಒಂದು ವರ್ಷದ ಸೇವಾ ಅನುಭವ ಇರುವ ಅಭ್ಯರ್ಥಿಗಳು ಅ.25ರೊಳಗೆ ಜಂಟಿ ಕೃಷಿ ನಿರ್ದೇಶಕ ಕಚೇರಿಯಲ್ಲಿ ಅರ್ಜಿ ಪಡೆದು ಪೂರ್ಣ ಮಾಹಿತಿಯೊಂದಿಗೆ ಸೀಲು ಮಾಡಿದ ಲಕೋಟೆಯಲ್ಲಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net