ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಗ್ರಹಣ

7 vikram 6
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಕೆಎಲ್​ಇ ಸಂಸ್ಥೆಯ ಶ್ರೀ ಮೃತ್ಯುಂಜಯ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಉದ್ಯೋಗ ಮೇಳ ಯಶಸ್ವಿಯಾಗಿ ಜರುಗಿತು.

ಶಾಸಕ ಅರವಿಂದ ಬೆಲ್ಲದ ಮೇಳ ಉದ್ಘಾಟಿಸಿ ಮಾತನಾಡಿ, ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸರ್ಕಾರಿ ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಗ್ರಹಣ ಹಿಡಿದಿದೆ. ಅದಲ್ಲದೆ ನೇಮಕಾತಿ ಸಹ ವಿನಾಕಾರಣ ವಿಳಂಬವಾಗುತ್ತಿವೆ. ಆಯ್ಕೆ ಪರೀಕ್ಷೆ ನಡೆಸುವಲ್ಲೂ ನಿರ್ಲಕ್ಷ್ಯ ತೋರುತ್ತಿರುವುದರಿಂದ ಪರೀಕ್ಷೆಗಳಲ್ಲಿ ಸಾಕಷ್ಟು ಎಡವಟ್ಟುಗಳಾಗಿ ಅರ್ಹ ಅಭ್ಯರ್ಥಿಗಳು ಅನ್ಯಾಯಕ್ಕೆ ಒಳಗಾಗುವಂತಾಗಿದೆ ಎಂದರು.

ನಿರುದ್ಯೋಗ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಉತ್ತರ ಕರ್ನಾಟಕದ ಉದ್ಯೋಗಾಕಾಂಕ್ಷಿ ಯುವ ಜನತೆಗೆ ಪಾರದರ್ಶಕ ಹಾಗೂ ಪಕ್ಷ ಪಾತವಿಲ್ಲದ ಸೂಕ್ತ ವೇದಿಕೆ ಸ್ಥಾಪಿಸುವ ನಮ್ಮ ಪ್ರಯತ್ನಕ್ಕೆ ಈ ಬೃಹತ್​ ಉದ್ಯೋಗ ಮೇಳ ಮುನ್ನುಡಿಯಾಗಿದೆ. ಸ್ವಾಮಿ ವಿವೇಕಾನಂದರು ಹೇಳಿದಂತೆ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ನಾವು ಯುವ ಸಮುದಾಯವನ್ನು ಸದೃಢಗೊಳಿಸಬೇಕಿದೆ. ಈ ಉದ್ಯೋಗ ಮೇಳದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು.

ಉದ್ಯೋಗ ಮೇಳದಲ್ಲಿ ಪಾಲ್ಗೊಂಡಿದ್ದ 67ಕ್ಕೂ ಅಧಿಕ ಕಂಪನಿಗಳು 2890 ಅಭ್ಯರ್ಥಿಗಳ ಸಂದರ್ಶನ ನಡೆಸಿದರು. ಈ ಪೈಕಿ 1035 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net