

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್‌ಸಿ) ನಡೆಸುವ ನೇಮಕಾತಿ ಸಂಬಂಧ ಡಿ.24 ಮತ್ತು 25 ಲಿಖಿತ ಪರೀಕ್ಷೆ ಹಮ್ಮಿಕೊಂಡಿದೆ. ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಹೊರಡಿಸಿ ನಗರ ಪೊಲೀಸ್ ಆಯುಕ್ತ ಸಿ.ಎಚ್. ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಕಿರಿಯ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿ ಡಿ.24 ಮತ್ತು 25ರಂದು ಬೆಂಗಳೂರು ನಗರದಲ್ಲಿ ಲಿಖಿತ ಪರೀಕ್ಷೆ ಏರ್ಪಡಿಸಿದೆ. ಸುಸೂತ್ರವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲ 200 ಮೀಟರ್ ವ್ಯಾಪ್ತಿಯಲ್ಲಿ ಬೆಳಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ನಿರ್ಬಂಧ ವಿಧಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.