ನಿರುಪಯುಕ್ತ ತ್ಯಾಜ್ಯದ ಮರುಬಳಕೆ ಇಂದು ಅವಶ್ಯಕ

IMG20250117203841.jpg
Published on

ಬೆಳಗಾವಿ: ಸಕ್ಕರೆ ಕಾರ್ಖಾನೆಯಲ್ಲಿ ವಿವಿಧ ಹಂತದಲ್ಲಿ ಆಗುವ ನಷ್ಟ ಗುರುತಿಸಬೇಕು ಹಾಗೂ ನಷ್ಟ ಸರಿದೂಗಿಸಲು ನಿರುಪಯುಕ್ತ ತ್ಯಾಜ್ಯದ ಮರುಬಳಕೆ ಮಾಡಿಕೊಳ್ಳುವುದು ಇಂದಿನ ಅವಶ್ಯಕತೆ ಎಂದು ಸಕ್ಕರೆ ತಂತ್ರಜ್ಞ ಆರ್.ವಿ.ವಟ್ನಾಳ ಹೇಳಿದರು.

ನಗರದ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಕ್ಕರೆ ಉತ್ಪನ್ನ ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳು ಮತ್ತು ಪ್ರಕ್ರಿಯೆಯಲ್ಲಿ ಸಕ್ಕರೆ ನಷ್ಟ ನಿಯಂತ್ರಿಸುವ ಕ್ರಮಗಳು ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ಕಾರ್ಯಕ್ರಮದ ಅತಿಥಿಯಾಗಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ನಿರ್ದೇಶಕ ರಾಜಗೋಪಾಲ ಮಾತನಾಡಿ ಕಬ್ಬಿನ ಇಳುವರಿ ಹೆಚ್ಚಿಸಲು, ಕಬ್ಬು ಕಟಾವು, ಸಾಗಾಣಿಕೆ ವೆಚ್ಚ ಕಡಿಮೆಯಾಗಿಸಲು ಕ್ರಮವಹಿಸಬೇಕು. ಕಾರ್ಖಾನೆಗಳ ಸಕ್ಕರೆ ಉತ್ಪಾದನಾ ಪ್ರಕ್ರಿಯೆಯಲ್ಲಿ ಇಳುವರಿ ನಷ್ಟ ಕಡಿಮೆ ಮಾಡಬೇಕಿದೆ. ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಕ್ಕರೆ ಕಾರ್ಖಾನೆಗಳಲ್ಲಿ ಉದ್ಯೋಗವಕಾಶ ಕಲ್ಪಿಸಬೇಕೆಂದರು.

ಸಂಸ್ಥೆಯ ತಾಂತ್ರಿಕ ಸಲಹೆಗಾರರಾದ ಸಿ.ಬಿ.ಪಾಟೀಲ್ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಾಗಾರದಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯದ ವಿವಿಧ ಕಾರ್ಖಾನೆಗಳಿಂದ ಸುಮಾರು 60ಕ್ಕೂ ಅಧಿಕ ತಾಂತ್ರಿಕ ಸಿಬ್ಬಂದಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net