ದ.ಕ, ಉಡುಪಿ ಜಿಲ್ಲೆಗಳಿಗೆ 3 ದಿನ ರೆಡ್ ಅಲರ್ಟ್!

rain
Published on

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇನ್ನು ಮೂರು ದಿನ (ಆಗಸ್ಟ್ 5ರವರೆಗೆ)ರೆಡ್ ಅಲರ್ಟ್ ಇರಲಿದೆ. ಮಳೆ ಮತ್ತಷ್ಟು ಬಿರುಸು ಪಡೆಯುವ ಸಾಧ್ಯತೆಯಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.

ಶುಕ್ರವಾರದವರೆಗೆ ರೆಡ್, ನಂತರ ಆರೆಂಜ್ ಅಲರ್ಟ್ ಇರಲಿದೆ. ಕರಾವಳಿಯಲ್ಲಿ ಅತಿ ಭಾರಿ ಮಳೆಯ ನಿರೀಕ್ಷೆ ಇದೆ. ಸಮುದ್ರದಲ್ಲಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

ಮಂಗಳವಾರ ಬೆಳಗ್ಗೆ ಅಂತ್ಯಗೊಂಡ ಹಿಂದಿನ 24 ಗಂಟೆ ಅವಧಿಯಲ್ಲಿ ಸುಬ್ರಹ್ಮಣ್ಯದಲ್ಲಿ ಜಿಲ್ಲೆಯಲ್ಲೇ ಗರಿಷ್ಟ ಮಳೆ (28.35 ಸೆಂ.ಮೀ.) ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net