ಕೊಡಗಿಗೆ ರೆಡ್ ಅಲರ್ಟ್

IMG-20220805-WA0051
Published on

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗಾಳಿ- ಮಳೆ ಹೆಚ್ಚಾಗಿರುವುದರಿಂದ ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ರೆಡ್ ಅಲಟರ್ ಘೋಷಿಸಿದ್ದಾರೆ. ಶನಿವಾರ ಮುಂಜಾನೆ ೮.೩೦ ಗಂಟೆವರೆಗೆ ಅನ್ವಯ ಆಗುವಂತೆ ರೆಡ್ ಅಲಟರ್ ಘೋಷಿಸಲಾಗಿದೆ.

ಪ್ರಸ್ತುತ ವರ್ಷದ ಮುಂಗಾರು ಮಳೆಗಾಲದಲ್ಲಿ ಪ್ರಥಮ ಬಾರಿಗೆ ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಹಲವು ಬಾರಿ ಆರೇಂಜ್ ಅಲರ್ಟ್ ಘೋಷಿಸಲಾಗಿತ್ತು. ಜೀವನದಿ ಕಾವೇರಿ ಸೇರಿ ದ್ದಂತೆ ಜಿಲ್ಲೆಯಲ್ಲಿ ಹರಿಯುವ ನದಿ- ತೊರೆಗಳು ಮೈದುಂಬಿ ಹರಿಯಲಾರಂಭಿಸಿದೆ. ಹಲವೆಡೆ ಸಣ್ಣಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿದೆ.

ಶನಿವಾರ ಶಾಲೆಗೆ ರಜೆ
ಜಿಲ್ಲೆಯಲ್ಲಿ ವ್ಯಾಪಕ ಮಳೆ ಇರುವ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ರಜೆ ದಿನವನ್ನು ಮುಂದಿನ ದಿನಗಳಲ್ಲಿ ಸರಿದೂಗಿಸಿಕೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ವೇದಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net