ನಾಳೆಯಿಂದ 6 ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​​:ಬಿರುಸು ಪಡೆದ ಮುಂಗಾರು

New Rain
Published on

ಬೆಂಗಳೂರು: ರಾಜ್ಯದಲ್ಲೆಡೆ ಮುಂಗಾರು ಬಿರುಸು ಪಡೆದಿದ್ದು, ಹಲವು ಜಿಲ್ಲೆಗಳಲ್ಲಿ ಬುಧವಾರವೂ ಧಾರಾಕಾರವಾಗಿ ವರ್ಷಧಾರೆಯಾಗಿದೆ. ಈ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳು ಇನ್ನಷ್ಟು ವೇಗ ಪಡೆದಿವೆ.

ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಂಡಿದ್ದು, ದಕ್ಷಿಣ ಕನ್ನಡ ವ್ಯಾಪ್ತಿಯ ಮಂಗಳೂರು ವಿಮಾನ ನಿಲ್ದಾಣ ವೀಕ್ಷಣಾಲಯ, ಕೋಟಾ, ಮೂಲ್ಕಿ, ಉಡುಪಿಯ ಕುಂದಾಪುರ, ಉಡುಪಿ ನಗರ, ಬೆಂಗಳೂರು ನಗರ, ಮೈಸೂರು, ದಾವಣಗೆರೆ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಭರ್ಜರಿ ಮಳೆ ಸುರಿದಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಜೂ 12 ರಿಂದ ಜೂ. 15ರವರೆಗೆ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್​ ಅಲರ್ಟ್ ಕೊಟ್ಟಿದೆ. ಈ ಅವಧಿಯಲ್ಲಿ 204 ಮಿಮೀವರೆಗೆ ಮಳೆ ಸುರಿಯುವ ಸಂಭವ ಇದೆ. ಬೆಳಗಾವಿ, ಧಾರವಾಡ, ಗದಗದಲ್ಲಿಯೂ ಜೂ 12ರಂದು ಅಧಿಕ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್​ ಅಲರ್ಟ್​​​ ಸಹ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಜೂ.13ರಿಂದ ಮುಂದಿನ 2 ದಿನ ಆರೆಂಜ್​ ಅಲರ್ಟ್​​​ ಇರಲಿದೆ.

ಬೆಂಗಳೂರು ನಗರ, ಬೆಂ.ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬಳ್ಳಾರಿ, ರಾಯಚೂರು, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿಯಲ್ಲಿ ಮುಂದಿನ 4 ದಿನ ಯೆಲ್ಲೋ ಅಲರ್ಟ್​​​​​​ ಇರಲಿದೆ. ವಿವಿಧ ಭಾಗಗಳಲ್ಲಿ ಮಳೆ ಗಿಂತ ಗಾಳಿ ವೇಗವೂ ಜಾಸ್ತಿ ಇರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net