ಕರಾವಳಿಯಲ್ಲಿ ಭಾನುವಾರವೂ ರೆಡ್ ಅಲರ್ಟ್

RAIN copy
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಶನಿವಾರ ಕೂಡ ಮುಂದುವರಿದಿದೆ. ಹವಾಮಾನ ಇಲಾಖೆ ಕರಾವಳಿಯಾದ್ಯಂತ ಭಾನುವಾರವೂ (ಆಗಸ್ಟ್ 7) ರೆಡ್ ಅಲರ್ಟ್ ಘೋಷಿಸಿದ್ದು, ಮಳೆ ಇನ್ನಷ್ಟು ಬಿರುಸಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆ ನೀಡಿದೆ.

ಆ.8ರಿಂದ 11ರ ತನಕ ನಾಲ್ಕು ದಿನ ಆರೆಂಜ್ ಅಲರ್ಟ್ ಇರಲಿದೆ. 13ರವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಬಳಿಕ ನಿಧಾನವಾಗಿ ಇಳಿಕೆಯಾಗಲಿದೆ ಎನ್ನುತ್ತಾರೆ ಹವಾಮಾನ ತಜ್ಞರು.

ಎರಡು ದಿನಗಳಿಂದ ದಿನವಿಡೀ ಮಳೆ ಸುರಿಯುತ್ತಿರುವುದರಿಂದ ಜಿಲ್ಲಾದ್ಯಂತ ತೀವ್ರ ಚಳಿಯ ವಾತಾವರಣ ಕಂಡುಬಂದಿದೆ. ದಿನದ ಬಹುಭಾಗ ಒಳ್ಳೆಯ ಮಳೆಯೊಂದಿಗೆ ಚಳಿಗಾಳಿಯೂ ಬೀಸುತ್ತಿರುವುದರಿಂದ ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ. ಕೆಲವು ದಿನ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net