ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ: ದಕ್ಷಿಣ ಕನ್ನಡ ಶಾಲೆ ಕಾಲೇಜುಗಳಿಗೆ ರಜೆ

Rain
Published on

ಮಂಗಳೂರು: ಹವಾಮಾನ ಇಲಾಖೆ ಕರಾವಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ದಕ್ಷಿಣಕನ್ನಡ ಜಿಲ್ಲೆಯ ಎಲ್ಲ ಅಂಗನವಾಗಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ, ಪದವಿ ಮತ್ತು ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್, ಐಟಿಐ ಸೇರಿದಂತೆ ಸರ್ಕಾರಿ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಆದೇಶ ಹೊರಡಿಸಿದ್ದಾರೆ.

ಮಕ್ಕಳು ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪೋಷಕರು ಎಚ್ಚರಿಕೆ ವಹಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತವಾಗಿದ್ದು, ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು. ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಸಾರ್ವಜನಿಕರು ತುರ್ತು ಸಂದರ್ಭದಲ್ಲಿ 24*7 ಕಂಟ್ರೋಲ್ ರೂಂ ಸಂಖ್ಯೆ 1077/0824-2442590ಯನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net