ನಾಳೆ ಉಡುಪಿ,ಉತ್ತರ ಕನ್ನಡದಲ್ಲಿ ರೆಡ್​ ಅಲರ್ಟ್:​​​​ಹವಾಮಾನ ಇಲಾಖೆ ಮೂನ್ಸೂಚನೆ

rain
Published on

ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ,ಕರಾವಳಿ, ಉತ್ತರ ಕರ್ನಾಟಕ ವ್ಯಾಪ್ತಿಯ ಬಹುತೇಕ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಕರ್ನಾಟಕದ ಕೆಲ ಪ್ರದೇಶಗಳಲ್ಲಿ ಮುಂದಿನ 2 ದಿನ ಇನ್ನಷ್ಟು ಬಿರುಸಾಗಿ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.

ದಕ್ಷಿಣ ಕನ್ನಡದ ಮಂಗಳೂರು, ದಾವಣಗೆರೆ, ಕಲಬುರಗಿಯ ಆಳಂದ, ಗಂಗಾಪುರ, ಕೊಪ್ಪಳದ ಗಂಗಾವತಿ, ಯಾದಗಿರಿಯ ಭೀಮರಾಯನಗುಡಿ ಮತ್ತು ಯಾದಗಿರಿಯ ಕವಡಿಮಟ್ಟಿ ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಮಂಗಳವಾರ ವರ್ಷಧಾರೆಯಾಗಿದೆ. ಉಡುಪಿ, ಉತ್ತರ ಕನ್ನಡದಲ್ಲಿ ಸೆ.25ರಂದು ಅತಿಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್​ ಅರ್ಲಟ್​ ಕೊಟ್ಟಿದೆ. ದಕ್ಷಿಣ ಕನ್ನಡದಲ್ಲಿ ಸೆ.25ರಿಂದ ಸೆ.26ರವರೆಗೆ, ಬೀದರ್​, ಕಲಬುರಗಿ, ಯಾದಗಿರಿಯಲ್ಲಿ ಸೆ.25ರಂದು ಭಾರಿ ಪ್ರಮಾಣದಲ್ಲಿ ಮಳೆಯಾಗುವ ಹಿನ್ನೆಲೆಯಲ್ಲಿ ಆರೆಂಜ್​ ಅರ್ಲಟ್​ ಕೊಡಲಾಗಿದೆ. ಕರಾವಳಿ ಭಾಗದಲ್ಲಿ ಗಂಟೆಗೆ 35-45 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಇಲಾಖೆ ಸೂಚಿಸಿದೆ.

ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲಿ ಮುಂದಿನ 2 ದಿನ ಯೆಲ್ಲೋ ಅರ್ಲಟ್​ ಇರಲಿದೆ.ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಮತ್ತು ವಿಜಯನಗರದಲ್ಲಿ ಮುಂದಿನ 48 ಗಂಟೆ ಗುಡುಗು ಸಹಿತ ಸಾಧಾರಣ ವರ್ಷಧಾರೆಯಾಗಲಿದೆ.

ಬೆಂಗಳೂರಿನಲ್ಲಿ ಮುಂದಿನ 2 ದಿನ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29 ಡಿ.ಸೆ.ಮತ್ತು 20 ಡಿ.ಸೆ. ಇರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net