ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡಕ್ಕೆ ಭಾರತ್ ಆಗ್ರೋವೆಟ್‌ನಿಂದ 5 ಲಕ್ಷ ರೂ.ದೇಣಿಗೆ

mng-10jan-redcross
Published on



ಮಂಗಳೂರು : ದ.ಕ.ಜಿಲ್ಲಾಧಿಕಾರಿ ಕಚೇರಿ ಸಮೀಪ ನಿರ್ಮಾಣವಾಗುತ್ತಿರುವ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಶತಮಾನೋತ್ಸವ ಕಟ್ಟಡಕ್ಕೆ ಭಾರತ್ ಆಗ್ರೋವೆಟ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ತನ್ನ ಕಾರ್ಪೋರೆಟ್ ಸಾಮಾಜಿಕ ಜವಾಬ್ದಾರಿ ನಿಧಿಯಿಂದ 5 ಲಕ್ಷ ರೂ.ದೇಣಿಗೆ ನೀಡಿದೆ. ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಸಮಿತಿಯ ಚೇರ್ಮನ್ ಸಿಎ ಶಾಂತರಾಮ ಶೆಟ್ಟಿ ಅವರು ಭಾರತ್ ಆಗ್ರೋವೆಟ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಡಾ.ಅರುಣ್ ರೈ ಅವರಿಂದ ದೇಣಿಗೆಯ ಚೆಕ್ ಸ್ವೀಕರಿಸಿದರು.
ಸಂಸ್ಥೆಯ ನಿರ್ದೇಶಕ ದಯಾನಂದ ರೈ, ಹಿರಿಯ ವ್ಯವಸ್ಥಾಪಕ ಡಾ.ವಸಂತ್ ಶೆಟ್ಟಿ , ರೆಡ್‌ಕ್ರಾಸ್ ದ.ಕ.ಜಿಲ್ಲಾ ಸಮಿತಿಯ ವೈಸ್ ಚೇರ್ಮನ್ ಡಾ.ಸತೀಶ್ ರಾವ್, ಆಡಳಿತ ಮಂಡಳಿ ಸದಸ್ಯರಾದ ಡಾ. ಬಿ ಸಚ್ಚಿದಾನಂದ ರೈ, ಗುರುದತ್ ಎಂ.ನಾಯಕ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net