ಸೆ.20ರಿಂದ 22ರವರೆಗೆ ಮೈಸೂರು ವಿಭಾಗ ಮಟ್ಟದ ಯುವ ರೆಡ್‌ಕ್ರಾಸ್ ಪ್ರೇರಣಾ ಶಿಬಿರ

rrrrrrrrrrrr
Published on



ಮಂಗಳೂರು : ಭಾರತೀಯ ರೆಡ್ ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಶಾಖೆ ಮತ್ತು ಕರ್ನಾಟಕ ರಾಜ್ಯ ಶಾಖೆ ವತಿಯಿಂದ ಮಂಗಳೂರು ವಿಶ್ವ ವಿದ್ಯಾನಿಲಯದ ಯುವ ರೆಡ್ ಕ್ರಾಸ್ ವಿಭಾಗದ ಸಹಯೋಗದಲ್ಲಿ ಸೆ.20ರಿಂದ 22ರವರೆಗೆ ಮಂಗಳೂರಿನ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಮೈಸೂರು ವಿಭಾಗ ಮಟ್ಟದ ಯುವ ರೆಡ್ ಕ್ರಾಸ್ ಪ್ರೇರಣಾ ಶಿಬಿರ ನಡೆಯಲಿದೆ. ಮೈಸೂರು, ಮಂಡ್ಯ, ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಉಡುಪಿ ಹಾಗೂ ದ.ಕ.ಜಿಲ್ಲೆಗಳ ವಿವಿಧ ವಿಶ್ವ ವಿದ್ಯಾನಿಲಯಗಳಿಂದ 200 ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಲಿದ್ದಾರೆ.
ಸೆ.20ರಂದು ಬೆಳಗ್ಗೆ 10ಕ್ಕೆ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಶಿಬಿರ ಉದ್ಘಾಟಿಸಲಿದ್ದಾರೆ. ರೆಡ್ ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಶಾಖೆಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ರೆಡ್ ಕ್ರಾಸ್ ಕರ್ನಾಟಕ ರಾಜ್ಯ ಶಾಖೆಯ ಚೇರ್ಮನ್
ವಿಜಯಕುಮಾರ್ ಪಾಟೀಲ್, ಉಪಾಧ್ಯಕ್ಷ ಆನಂದ .ಎಸ್.ಜಿಗಜಿಣಗಿ, ಖಜಾಂಜಿ ಯತೀಶ್ ಬೈಕಂಪಾಡಿ, ಯುವ ರೆಡ್ ಕ್ರಾಸ್‌ನ ನಿರ್ದೇಶಕ ಎಂ.ಎಸ್.ಶರತ್, ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.ಕೆ.ವಿ.ರಾವ್ ಮುಖ್ಯ ಅತಿಥಿಗಳಾಗಿ
ಭಾಗವಹಿಸಲಿದ್ದಾರೆ.
ಯುವ ಪ್ರೇರಣಾ ಶಿಬಿರದಲ್ಲಿ ಯುವ ಸ್ವಯಂ ಸೇವಕರಿಗೆ, ರೆಡ್ ಕ್ರಾಸ್ ಸಂಘಟನೆಯ ಅರಿವು, ಪ್ರಥಮ ಚಿಕಿತ್ಸೆ, ವಿಪತ್ತು ನಿರ್ವಹಣೆ, ಪರಿಸರ ಕಾಳಜಿ, ಮನೋಸ್ಥೆರ್ಯ ಸಮತೋಲನ, ಸಾಮಾಜಿಕ ಸೇವೆ, ರಕ್ತದಾನದ ಮಹತ್ವ, ಯೋಗ ಮುಂತಾದ ತರಬೇತಿ ನೀಡಲಾಗುವುದು. ಜಿಲ್ಲಾ ರೆಡ್‌ಕ್ರಾಸ್‌ನ ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ, ಮಂಗಳೂರು ವಿ.ವಿ.ಯುವ ರೆಡ್ ಕ್ರಾಸ್ ನೋಡಲ್ ಅಧಿಕಾರಿ ಡಾ. ಗಾಯತ್ರಿ ಅಮೀನ್, ಜಿಲ್ಲಾ ಸಂಸ್ಥೆಯ ಯುವ ರೆಡ್ ಕ್ರಾಸ್ ನಿರ್ದೇಶಕ ಸಚೇತ್ ಸುವರ್ಣ ಶಿಬಿರದ ಸಂಯೋಜಕರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net