ಕ್ಯಾನ್ಸರ್ ಜಾಗೃತಿ ಆಂದೋಲನದಿಂದ ಸಮಾಜದಲ್ಲಿ ಅರಿವು ಡಾ.ಸಚ್ಚಿದಾನಂದ ರೈ ಅಭಿಮತ

mng-9sep-redcross
Published on




ಮಂಗಳೂರು : ಕ್ಯಾನ್ಸರ್ ಮಾರಕ ಕಾಯಿಲೆಯಾಗಿದ್ದು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿದರೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಮೂಲಕ ಗುಣ ಪಡಿಸಿಕೊಳ್ಳಬಹುದು. ತಂಬಾಕು ಉತ್ಪನ್ನಗಳ ಸೇವನೆ ಹಲವು ಬಗೆಯ ಕ್ಯಾನ್ಸರ್‌ಗೆ ಕಾರಣವಾಗಿದ್ದು ಜಾಗೃತಿ ಆಂದೋಲನದ ಮೂಲಕ ಸಮಾಜದಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದು ರೆಡ್‌ಕ್ರಾಸ್‌ನ ಆರೋಗ್ಯ ಮತ್ತು ಪ್ರಥಮ ಚಿಕಿತ್ಸೆ ಉಪ ಸಮಿತಿ ನಿರ್ದೇಶಕ ಡಾ.ಸಚ್ಚಿದಾನಂದ ರೈ ಹೇಳಿದರು.
ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಸಮಿತಿ, ಯೂತ್ ರೆಡ್ ಕ್ರಾಸ್ ಮಂಗಳೂರು ವಿ.ವಿ. ಹಾಗೂ ಡಾ.ದಯಾನಂದ ಪೈ-ಡಾ.ಸತೀಶ್ ಪೈ ಪ್ರಥಮ ದರ್ಜೆ ಕಾಲೇಜು ರಥಬೀದಿ ಇವುಗಳ ಆಶ್ರಯದಲ್ಲಿ ರಥಬೀದಿ ಕಾಲೇಜು ಸಭಾಂಗಣದಲ್ಲಿ ಶನಿವಾರ ನಡೆದ ಕ್ಯಾನ್ಸರ್ ಜಾಗೃತಿ ಆಂದೋಲನ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.
ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಸಮಿತಿಯ ಚೇರ್ಮನ್ ಸಿಎ ಶಾಂತರಾಮ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ರಥಬೀದಿ ಕಾಲೇಜಿನ ಪ್ರಾಚಾರ್ಯ ಪ್ರೊ.ಜಯಕರ ಭಂಡಾರಿ.ಎಂ. ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿ.ವಿ. ಯೂತ್ ರೆಡ್‌ಕ್ರಾಸ್‌ನ ನೋಡಲ್ ಅಧಿಕಾರಿ ಡಾ. ಗಾಯತ್ರಿ.ಎನ್., ಮಂಗಳೂರು ವಿ.ವಿ. ಯೂತ್ ರೆಡ್‌ಕ್ರಾಸ್‌ನ ನೋಡಲ್ ಅಧಿಕಾರಿ ನಿತ್ಯಶ್ರೀ.ಬಿ.ವಿ.,
ರೆಡ್‌ಕ್ರಾಸ್ ಆಡಳಿತ ಸಮಿತಿ ನಿರ್ದೇಶಕ ಪಿ.ಬಿ.ಹರೀಶ್ ರೈ, ಖಜಾಂಜಿ ಮೋಹನ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ರೆಡ್‌ಕ್ರಾಸ್ ಸಂಸ್ಥೆ ಕಾರ್ಯದರ್ಶಿ ಸಂಜಯ ಶೆಟ್ಟಿ , ಉಪನ್ಯಾಸಕಿ ಜ್ಯೋತಿ .ಪಿ. ಉಪಸ್ಥಿತರಿದ್ದರು.
ಯೂತ್ ರೆಡ್ ಕ್ರಾಸ್ ನಿರ್ದೇಶಕ ಸಚೇತ್ ಸುವರ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ರಥಬೀದಿ ಕಾಲೇಜಿನ ಯುವ ರೆಡ್ ಕ್ರಾಸ್ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಅಶೋಕ್.ಸಿ.ಎಚ್.ಸ್ವಾಗತಿಸಿ, ನಯನಕುಮಾರಿ .ಕೆ. ವಂದಿಸಿದರು. ವಿದ್ಯಾರ್ಥಿನಿ ದೀಪ್ತಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net