ನೈಋತ್ಯ ರೈಲ್ವೆಯ 46 ನಿಲ್ದಾಣಗಳ ಪುನರಾಭಿವೃದ್ಧಿ

SSS New
Published on

ಹುಬ್ಬಳ್ಳಿ : ನೈಋತ್ಯ ರೈಲ್ವೆ ವ್ಯಾಪ್ತಿಯಲ್ಲಿ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ 1,103 ಕೋಟಿ ರೂ.ಗಳ ವೆಚ್ಚದಲ್ಲಿ 46 ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲಾಗುತ್ತಿದೆ ಮತ್ತು 5 ಪ್ರಮುಖ ನಿಲ್ದಾಣಗಳನ್ನು ಸಹ ಪುನರಾಭಿವೃದ್ಧಿ ಮಾಡಲಾಗುತ್ತಿದೆ.

ಇಲ್ಲಿನ ರೈಲ್​ಸೌಧದಲ್ಲಿ ಬುಧವಾರದಂದು ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಅರವಿಂದ ಶ್ರೀವತ್ಸವ, ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ರೈಲು ನಿಲ್ದಾಣವನ್ನು 397 ಕೋಟಿ ರೂ.ವೆಚ್ಚದಲ್ಲಿ ಪುನರ್ ಅಭಿವೃದ್ಧಿ ಪಡಿಸಲಾಗುತ್ತಿದೆ. ಯಶವಂತಪುರ ನಿಲ್ದಾಣವನ್ನು 367 ಕೋಟಿ ರೂ., ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣವನ್ನು 484 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲಾಗುತ್ತಿದೆ. 2025ರಲ್ಲಿ ಈ ಯೋಜನೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಪ್ರಸಕ್ತ ಸಾಲಿನ ಬಜೆಟ್​ನಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ನೀಡಿರುವ ರೈಲ್ವೆ ಯೋಜನೆಗಳ ಕೊಡುಗೆ ಕುರಿತು ಮಂಗಳವಾರದಂದು ವಿಡಿಯೋ ಕಾನ್ಪರೆನ್ಸ್ ಮೂಲಕ ವಿವರಣೆ ನೀಡಿದರು.

ಇದಕ್ಕೂ ಮೊದಲು ವಿಡಿಯೋ ಕಾನ್ಪರೆನ್ಸ್ ಮೂಲಕ ಸುದ್ದಿಗೋಷ್ಠಿ ನಡೆಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ಪ್ರಸಕ್ತ ಸಾಲಿನ ಬಜೆಟ್​ನಲ್ಲಿ ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಿಗೆ ನೀಡಿರುವ ರೈಲ್ವೆ ಯೋಜನೆಗಳ ಕೊಡುಗೆ ಕುರಿತು ವಿವರಣೆ ನೀಡಿದರು.

2024-25ನೇ ಸಾಲಿಗೆ 7,559 ಕೋಟಿ ರೂ.ಗಳ ಕಾರ್ಯ ವೆಚ್ಚದ ಅಡಿಯಲ್ಲಿ ಕರ್ನಾಟಕಕ್ಕೆ ಅತ್ಯಧಿಕ ಬಜೆಟ್ ಹಂಚಿಕೆ ಮಾಡಲಾಗಿದೆ, ಇದು 2009-14ನೇ ಸಾಲಿನ ಸರಾಸರಿ ಬಜೆಟ್ ಅನುದಾನ 835 ಕೋಟಿ ರೂ.ಗಳಿಗೆ ಹೋಲಿಸಿದರೆ 9 ಪಟ್ಟು ಹೆಚ್ಚಾಗಿದೆ ಎಂದು ಹೇಳಿದರು.

ಸಧ್ಯ ಕರ್ನಾಟಕದಲ್ಲಿ 47,016 ಕೋಟಿ ರೂ.ಗಳ ಮೌಲ್ಯದ 3,840 ಕಿ.ಮೀ ಉದ್ದದ 31 ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net