ರಾಜ್ಯದಲ್ಲಿ ತಗ್ಗಿದ ಕರೊನಾ: 11 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ

Corona
Published on

ಬೆಂಗಳೂರು: ಕರೊನಾ ಸೋಂಕಿನ ಪ್ರಕರಣಗಳು ತಗ್ಗುತ್ತಾ ಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದು ನೈಟ್​ ಕರ್ಫ್ಯೂವನ್ನು ತೆರವುಗೊಳಿಸಿದೆ. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕರೊನಾ ನಿಯಂತ್ರಣದಲ್ಲಿದೆ ಎಂಬುದಕ್ಕೆ ಪೂರಕವಾದ ಅಂಕಿಅಂಶಗಳು ಪ್ರಕಟಗೊಂಡಿವೆ.

ಇಂದಿನ ರಾಜ್ಯ ಆರೋಗ್ಯ ಇಲಾಖೆ ಹೆಲ್ತ್​ ಬುಲೆಟಿನ್​ ಪ್ರಕಾರ, ಗುರುವಾರ(ನ.4) ರಾಜ್ಯಾದ್ಯಂತ ವರದಿಯಾಗಿರುವ ಹೊಸ ಪ್ರಕರಣಗಳ ಸಂಖ್ಯೆ 214 ಆಗಿದೆ. ಈ ಸಂಖ್ಯೆಗಿಂತ ಹೆಚ್ಚಾಗಿ ಅಂದರೆ 286 ಜನ ಸೋಂಕಿತರು ಕರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕರೊನಾಗೆ ಏಳು ಜನ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಹಾಲಿ 8,188 ಕರೊನಾ ಸಕ್ರಿಯ ಪ್ರಕರಣಗಳಿವೆ.

ಹನ್ನೊಂದು ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರದಲ್ಲೇ ಅತಿಹೆಚ್ಚಾಗಿ ಅಂದರೆ 118 ಹೊಸ ಸೋಂಕು ಪ್ರಕರಣಗಳು ನ.4 ರಂದು ವರದಿಯಾಗಿವೆ. ಮೈಸೂರು ಜಿಲ್ಲೆಯಲ್ಲಿ 25, ಉತ್ತರ ಕನ್ನಡದಲ್ಲಿ 11, ದಕ್ಷಿಣ ಕನ್ನಡದಲ್ಲಿ 10 ಮತ್ತು ಉಡುಪಿಯಲ್ಲಿ 7 ಹೊಸ ಪ್ರಕರಣಗಳು ದಾಖಲಾಗಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net