

ಧಾರವಾಡ: ಭಾರತೀಯ ನ್ಯಾಯಾಂಗ ವ್ಯವಸ್ಥೆಯು ವÀÄಧ್ಯಸ್ಥಿಕೆ, ಲೋಕ ಅದಾಲತ್, ಜನತಾ ನ್ಯಾಯಾಲಯಗಳಂಥ ವಿಶೇಷ ನ್ಯಾಯಾಂಗ ಸೇವೆಗಳನ್ನು ನೀಡುತ್ತದೆ. ಇವುಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದು ಹೈಕೋರ್ಟ್ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ಕುಮಾರ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಽಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರ ಹಾಗೂ ವಕೀಲರ ಸಂಘವು ಸಂಯುಕ್ತವಾಗಿ ಶನಿವಾರ ಆಯೋಜಿಸಿದ್ದ ಮಧ್ಯಸ್ಥಿಕೆ ಕುರಿತ ಪುನರ್‌ಮನನ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಕಕ್ಷಿದಾರರು ತಮ್ಮ ಪ್ರಕರಣ ಇತ್ಯರ್ಥಗೊಳಿಸುವ ಇಚ್ಚೆ ಹೊಂದಿದ್ದರೂ ವಿಳಂಬವಾಗುತ್ತಿದೆ ಎಂಬ ಭಾವನೆ ಅವರಲ್ಲಿ ಇರುತ್ತದೆ. ಅಂಥವರಿಗೆ ಮಧ್ಯಸ್ಥಿಕೆ ಕೇಂದ್ರದ ಮೂಲಕ ಸಮಾಲೋಚನೆ ಮಾಡಿ ತಿಳಿವಳಿಕೆ ನೀಡಬೇಕು. ಮಧ್ಯಸ್ಥಿಕೆ ಕೇಂದ್ರ, ಲೋಕ ಅದಾಲತ್ ಮತ್ತು ಜನತಾ ನ್ಯಾಯಾಲಯಗಳ ಮೂಲಕ ಪ್ರಕರಣಗಳು ಇತ್ಯರ್ಥವಾಗುವುದರಿಂದ ನ್ಯಾಯಾಲಯ ಮತ್ತು ಕಕ್ಷಿದಾರರ ಸಮಯ ಮತ್ತು ಹಣ ಉಳಿತಾಯವಾಗುತ್ತದೆ ಎಂದರು.
ರಾಜ್ಯ ವಕೀಲರ ಪರಿಷತ್ ಮಾಜಿ ಅಧ್ಯಕ್ಷ ಆನಂದಕುಮಾರ ಮಗದುಮ, ಸದಸ್ಯ ವಿ.ಡಿ. ಕಾಮರಡ್ಡಿ ಮಾತನಾಡಿದರು.
ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಽÃಶೆ ಕೆ.ಜಿ. ಶಾಂತಿ ಅಧ್ಯಕ್ಷತೆ ವಹಿಸಿದ್ದರು. ತರಬೇತಿ ಸಂಪನ್ಮೂಲ ವ್ಯಕ್ತಿಗಳಾದ ಬೆಂಗಳೂರಿನ ಬೃಂದಾ ನಂದಕುಮಾರ ಹಾಗೂ ಲತಾ ಪ್ರಸಾದ ವೇದಿಕೆಯಲ್ಲಿದ್ದರು.
ಹಿರಿಯ ಸಿವಿಲ್ ನ್ಯಾಯಾಽÃಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಪಿ.ಎಫ್. ದೊಡಮನಿ ಸ್ವಾಗತಿಸಿದರು. ಹಿರಿಯ ಸಿವಿಲ್ ನ್ಯಾಯಾಽÃಶೆ ವಿಜಯಲಕ್ಷಿ÷್ಮÃ ಗಣಾಪುರ ನಿರೂಪಿಸಿದರು. ಸಿಜೆಎಂ ಹಾಗೂ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಽÃಶ ಸಂಜಯ ಗುಡಗುಡಿ ವಂದಿಸಿದರು.
ಜಿಲ್ಲಾ ನ್ಯಾಯಾಽÃಶರು, ಧಾರವಾಡ ಹಾಗೂ ಗದಗ ಜಿಲ್ಲೆಗಳ ಮಧ್ಯಸ್ಥಿಕೆಗಾರ ನ್ಯಾಯವಾದಿಗಳು, ವಕೀಲರ ಸಂಘದ ಸದಸ್ಯರು ಭಾಗವಹಿಸಿದ್ದರು.