ಸೇವಾಲಾಲ್‌ರಿಂದ ಸಮಾಜದಲ್ಲಿ ಸುಧಾರಣೆ

15-02-Shiva-8
ರಾಯಚೂರಿನ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಗುರುವಾರ ಹಮ್ಮಿಕೊಂಡಿದ್ದ ಸಂತ ಸೇವಾಲಾಲ್ ಜಯಂತಿಯನ್ನು ಜಿ.ಪಂ. ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ ಉದ್ಘಾಟಿಸಿದರು. ತಹಸೀಲ್ದಾರ್ ಸುರೇಶ ವರ್ಮಾ, ತಾ.ಪಂ. ಇಒ ಚಂದ್ರಶೇಖರ ಪವಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ, ಸಮಾಜದ ಮುಖಂಡರಾದ ನಾರಾಯಣ ನಾಯಕ, ಲಚ್ಚಣ್ಣ ನಾಯಕ, ಶಿವಣ್ಣ ಪವಾರ, ಹನುಮಂತ ಚೌಹಾಣ ಇದ್ದರು.
Published on

ರಾಯಚೂರು: ಸಂತ ಸೇವಾಲಾಲ್‌ರು ತಮ್ಮ ವಿಚಾರಧಾರೆಗಳ ಮೂಲಕ ಸಮಾಜದಲ್ಲಿ ಸುಧಾರಣೆಯನ್ನು ತಂದಿದ್ದು, ಸಮಾಜದಲ್ಲಿನ ವೌಢ್ಯತೆಗಳನ್ನು ತೊಲಗಿಸುವಲ್ಲಿ ಅವರ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ ಹೇಳಿದರು.
ಸ್ಥಳೀಯ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಗುರುವಾರ ಏರ್ಪಡಿಸಿದ್ದ ಸಂತ ಸೇವಾಲಾಲ್ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿ, ಸಂತ ಸೇವಾಲಾಲ್ ತಮ್ಮ ಜೀವನವನ್ನು ಸಮಾಜದ ಅಭಿವೃದ್ಧಿಗೆ ಮುಡುಪಾಗಿಟ್ಟಿದ್ದರು ಎಂದರು.
ಪ್ರಕೃತಿಯ ಆರಾಧಕರಾಗಿದ್ದ ಸೇವಾಲಾಲ್ ಪರಿಸರ ಸಂರಕ್ಷಣೆ ಕುರಿತು ಅನೇಕ ಸಂದೇಶಗಳನ್ನು ಸಮಾಜಕ್ಕೆ ನೀಡಿದ್ದಾರೆ ಅವರ ತತ್ತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಶಿಕಾಂತ ಶಿವಪುರೆ ತಿಳಿಸಿದರು.
ಇದಕ್ಕೂ ಮೊದಲು ನಗರದ ಬಸವೇಶ್ವರ ವೃತ್ತದಿಂದ ರಂಗಮಂದಿರದವರೆಗೆ ಸಂತ ಸೇವಾಲಾಲ್‌ರ ಭಾವಚಿತ್ರ ಮೆರವಣಿಗೆ ನಡೆಸಲಾಯಿತು. ಹೆಚ್ಚುವರಿ ಪೊಲೀಸ್ ವರಿಷ್ಠಾಕಾರಿ ಡಾ.ಆರ್.ಶಿವಕುಮಾರ, ಸಹಾಯಕ ಆಯುಕ್ತ ಎಸ್.ಎಸ್.ಸಂಪಗಾವಿ ಇದ್ದರು.
ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಸುರೇಶ ವರ್ಮಾ, ತಾ.ಪಂ. ಇಒ ಚಂದ್ರಶೇಖರ ಪವಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ, ಸಮಾಜದ ಮುಖಂಡರಾದ ನಾರಾಯಣ ನಾಯಕ, ಲಚ್ಚಣ್ಣ ನಾಯಕ, ಶಿವಣ್ಣ ಪವಾರ, ಹನುಮಂತ ಚೌಹಾಣ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net