ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ತಿದ್ದುಪಡಿ ಅಗತ್ಯ

ಶ್ರೀರಂಗಪಟ್ಟಣದಲ್ಲಿ ಆಯೋಜಿಸಿದ್ದ  ಕಾನೂನು ಅರಿವು ಕಾರ್ಯಕ್ರಮವನ್ನು ಟಿ.ಗೋಪಾಲಕೃಷ್ಣ ರೈ ಉದ್ಘಾಟಿಸಿದರು.  ಸುರೇಶ್ ಬಾಬು, ಪರಶುರಾಮ್ ಸತ್ತಿಗೇರಿ ಇದ್ದರು.
ಶ್ರೀರಂಗಪಟ್ಟಣದಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಟಿ.ಗೋಪಾಲಕೃಷ್ಣ ರೈ ಉದ್ಘಾಟಿಸಿದರು. ಸುರೇಶ್ ಬಾಬು, ಪರಶುರಾಮ್ ಸತ್ತಿಗೇರಿ ಇದ್ದರು.
Published on

ಶ್ರೀರಂಗಪಟ್ಟಣ: ಲಂಚ ಪಡೆಯುವುದು ಎಷ್ಟು ಅಪರಾಧವೋ ಕೊಡುವುದೂ ಅಪರಾಧ. ಹಾಗಾಗಿ ಇದಕ್ಕೆ ಕಡಿವಾಣ ಹಾಕಲು ಕಾನೂನಿನ ಕಾಯ್ದೆಗಳಲ್ಲಿ ಕೆಲವೊಂದು ತಿದ್ದುಪಡಿ ತರಬೇಕಿದೆ ಎಂದು 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಗೋಪಾಲಕೃಷ್ಣ ರೈ ಅಭಿಪ್ರಾಯಪಟ್ಟರು.

ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದಲ್ಲಿ ಪಟ್ಟಣದ ಶ್ರೀರಂಗನಾಥ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಆಯೋಜಿಸಿದ್ದ ಲೋಕಾಯುಕ್ತ ಕಾಯ್ದೆ ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆ ಕುರಿತ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಭ್ರಷ್ಟಾಚಾರ ನಿಗ್ರಹಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ. ಶ್ರೀರಂಗಪಟ್ಟಣ ನ್ಯಾಯಾಲಯಕ್ಕೆ ನ್ಯಾಯಾಧೀಶರಾಗಿ ಆಗಮಿಸುವ ಪೂರ್ವದಲ್ಲಿ ನಾನು ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಜತೆಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾಗಿ 6 ವರ್ಷ ಸೇವೆ ಸಲ್ಲಿಸಿರುವ ಅನುಭವವಿದೆ. ಕೆಲವೊಂದು ಭ್ರಷ್ಟಾಚಾರ ಪ್ರಕರಣಗಳಲ್ಲಿ ದೂರುದಾರರು ಲೋಕಾಯುಕ್ತ ಅಧಿಕಾರಿ, ಸಿಬ್ಬಂದಿ ಬಳಸಿಕೊಳ್ಳಲಾಗುತ್ತದೆ. ನಂತರ ಆ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಾಗ ಕೆಲ ಬದಲಾವಣೆಗಳಿಂದ ಸುಳ್ಳು ಸಾಕ್ಷಿ ಹೇಳುವ ಮೂಲಕ ಪ್ರಕರಣ ಸರಿಯಾಗಿ ನಿಲ್ಲದಂತಾಗುತ್ತದೆ. ಇಂತಹ ಪ್ರಕರಣಗಳಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮಕೈಗೊಳ್ಳವ ಕುರಿತು ಕಾನೂನಿನಲ್ಲಿ ತಿದ್ದುಪಡಿಯಾಗಿದೆ ಎಂದರು.

ಲೋಕಾಯುಕ್ತ ವರಿಷ್ಠಾಧಿಕಾರಿ ಸುರೇಶ್‌ಬಾಬು ಮಾತನಾಡಿ, ಯಾವುದೇ ಇಲಾಖೆಗಳ ಸರ್ಕಾರಿ ನೌಕರರು ತಮಗಿರುವ ಕಾರ್ಯ ವ್ಯಾಪ್ತಿಯನ್ನು ಅರಿತು ಪ್ರಾಮಾಣಿಕವಾಗಿ ಕರ್ತವ್ಯ ಮಾಡಬೇಕು. ಇಲ್ಲದಿದ್ದಲ್ಲ ಭ್ರಷ್ಟಾಚಾರ ವಿರುದ್ಧದ ಕಠಿಣ ನಿಯಮಗಳಿಗೆ ಒಳಪಡಬೇಕಾಗುತ್ತದೆ ಎಂದರು.

ಅಪರ ಸಿವಿಲ್ ನ್ಯಾಯಾಧೀಶ ಎಚ್.ಮಹದೇವಪ್ಪ, ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ಹರೀಶ್ ಕುಮಾರ್, ಅಪರ ಸಿವಿಲ್ ನ್ಯಾಯಾಧೀಶ ಹನುಮಂತರಾಯಪ್ಪ, ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ, ಲೋಕಾಯುಕ್ತ ಡಿವೈಎಸ್ಪಿ ಸುನೀಲ್ ಕುಮಾರ್, ಇನ್ಸ್‌ಪೆಕ್ಟರ್‌ಗಳಾದ ಬ್ಯಾಟರಾಯಗೌಡ, ಜಯರತ್ನ, ತಾಲೂಕು ವಕೀಲರ ಸಂಘದ ಅಧ್ಯಕ್ಷ ಸತ್ಯನಾರಾಯಣ, ಪುರಸಭಾ ಮುಖ್ಯಾಧಿಕಾರಿ ಎಂ.ರಾಜಣ್ಣ, ಶ್ರೀರಂಗಪಟ್ಟಣ ಟೌನ್ ಠಾಣೆ ಇನ್‌ಸ್ಪೆಕ್ಟರ್ ಬಿ.ಎಸ್.ಪ್ರಕಾಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net