ಹಕ್ಕುಪತ್ರ ವಿತರಣೆಗೆ ಅಧಿಕಾರಿಗಳ ವಿಳಂಬ

24 smg 3
Published on

ಶಿವಮೊಗ್ಗ: ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಇ ಮತ್ತು ಬಿ ಬ್ಲಾಕ್​ನಲ್ಲಿ ವಾಸವಾಗಿರುವವರಿಗೆ ಹಕ್ಕುಪತ್ರ ನೀಡಲು ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಮತ್ತು ಬೊಮ್ಮನಕಟ್ಟೆ ಆಶ್ರಯ ಬಡಾವಣೆ ನಿವಾಸಿಗಳ ಸಂಘದ ನೇತೃತ್ವದಲ್ಲಿ ಸ್ಥಳೀಯರ ಬೊಮ್ಮನಕಟ್ಟೆಯಿಂದ ಡಿಸಿ ಕಚೇರಿವರೆಗೆ ಗುರುವಾರ ಪಾದಯಾತ್ರೆ ನಡೆಸಿದರು. ಬಳಿಕ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಬೊಮ್ಮನಕಟ್ಟೆ ಇ ಮತ್ತು ಬಿ ಬ್ಲಾಕ್​ನಲ್ಲಿ 30 ವರ್ಷಗಳಿಂದ 120-150 ಬಡ ಕುಟುಂಬಗಳು , ಕೂಲಿ ಕಾರ್ವಿುಕರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಅಲ್ಪಸಂಖ್ಯಾತರು ಗುಡಿಸಲು ಕಟ್ಟಿಕೊಂಡು ವಾಸವಾಗಿದ್ದಾರೆ. ಇವರಿಗೆ ಬೇರೆಲ್ಲೂ ನೆಲೆಯಿಲ್ಲ. ಇಲ್ಲಿ ಕುಡಿಯುವ ನೀರು ಮತ್ತು ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಬಿಪಿಎಲ್ ಪಡಿತರ ಚೀಟಿ, ಆಧಾರ್ ಕಾರ್ಡ್ ನೀಡಲಾಗಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯಂದ ಇದುವರೆಗೂ ಹಕ್ಕುಪತ್ರ ನೀಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಅಧಿಕಾರಿಗಳು ಕೂಡಲೇ ಈ ಬಗ್ಗೆ ಕ್ರಮ ಕೈಗೊಂಡು ಹಕ್ಕುಪತ್ರ ವಿತರಣೆ ಮಾಡಬೇಕು. ಇಲ್ಲದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.

ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಜಿಲ್ಲಾಧ್ಯಕ್ಷ ವಿ.ಭಗವಾನ್, ಪ್ರಧಾನ ಕಾರ್ಯದರ್ಶಿ ರಾಜು, ಪ್ರಮುಖರಾದ ಕೆ.ಉಷಾದೇವಿ, ರಮೇಶ್, ವಿಜಯ್ ಕುಮಾರ್, ನಟರಾಜ್, ಶಫೀರ್, ಮದನ್ ಕುಮಾರ್, ಮಂಜುನಾಥ್, ರಮೇಶ್ ರೆಡ್ಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net