ಶ್ರೀ ಮಲ್ಲಿಕಾರ್ಜುನಗೆ ನಮನ

26 MASKI 01
ಮಸ್ಕಿ ರಥಬೀದಿಯಲ್ಲಿರುವ ಶ್ರೀ ಮಲ್ಲಿಕಾರ್ಜುನ.
Published on

ಮಸ್ಕಿ: ಶಿವರಾತ್ರಿ ಅಂಗವಾಗಿ ಪಟ್ಟಣದ ರಥ ಬೀದಿಯ ಶ್ರೀ ಮಲ್ಲಿಕಾರ್ಜುನ ದೇವರಿಗೆ ಬುಧವಾರ ವಿಶೇಷ ಪೂಜೆ ನೆರವೇರಿಸಲಾಯಿತು. ಬೆಳಗ್ಗೆ ಶ್ರೀ ಮಲ್ಲಿಕಾರ್ಜುನ ದೇವರಿಗೆ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ಮಾಡಲಾಯಿತು.

ಬೆಳಿಗ್ಗೆಯಿಂದ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪುನೀತರಾದರು. ಸಂಜೆ 5 ಗಂಟೆಯಿಂದ ಪಟ್ಟಣ ಸೇರಿದಂತೆ ಸುತ್ತ್ತಲಿನ ಗ್ರಾಮಗಳ ಜನರು ಶ್ರೀ ಮಲ್ಲಿಕಾರ್ಜುನ ದೇವರ ದರ್ಶನಕ್ಕೆ ಆಗಮಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net