ಅ.2ರೊಳಗೆ ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಹೆಸರು ನೋಂದಾಯಿಸಿ

YOGESH SYADRI
Published on

ಚಿತ್ರದುರ್ಗ: ಹೊಸದಿಲ್ಲಿ ಮಕ್ಕಳ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ನವೆಂಬರ್ 15ರಂದು ಹೊಸದಿಲ್ಲಿಯಲ್ಲಿ ರಾಷ್ಟ್ರೀಯ ಮಕ್ಕಳ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಸಮ್ಮೇಳನದ ಕವಿಗೋಷ್ಠಿ, ವಿಚಾರಗೋಷ್ಠಿಗಳಲ್ಲಿ ಭಾಗವಹಿಸಲು ಬಯಸುವ ಚಿತ್ರದುರ್ಗ ಜಿಲ್ಲೆಯ ಪ್ರತಿಭಾವಂತ ಪ್ರೌಢಶಾಲೆ, ಪಿಯುಸಿ ವಿದ್ಯಾರ್ಥಿಗಳಿಗೆ ಅವಕಾಶವಿದೆ.

ಆಸಕ್ತ ವಿದ್ಯಾರ್ಥಿಗಳು ಅಥವಾ ಅವರ ಪಾಲಕರು ಅಕ್ಟೋಬರ್ 2ರೊಳಗೆ ಯೋಗೀಶ್ ಸಹ್ಯಾದ್ರಿ ಎಜುಕೇಷನ್ ಟ್ರಸ್ಟ್, ಕಾವೇರಿ ಇಂಡಸ್ಟ್ರೀಸ್ ಹತ್ತಿರ, ವಿದ್ಯಾನಗರ, ಚಿತ್ರದುರ್ಗ (ಮೊ.ನಂ: 99722 40239). ಇಲ್ಲಿ ಹೆಸರು ನೋಂದಾಯಿಸಬಹುದು ಎಂದು ಪರಿಷತ್ ಜಿಲ್ಲಾಧ್ಯಕ್ಷ ಯೋಗೀಶ್ ಸಹ್ಯಾದ್ರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net